ದೊಡ್ಡಬಳ್ಳಾಪುರ: ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ತಾಲೂಕಿನ ತೂಬಗೆರೆ ಹೋಬಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆ ಜ.31ರಂದು ನಡೆಯಲಿದೆ.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜ.31ರಂದು ಬೆಳಗ್ಗೆ 11ಗಂಟೆಗೆ ಕುಂದುಕೊರತೆ ಸಮಿತಿ ಸಭೆಯನ್ನು ಆಯೋಜಿಸಲಾಗಿದ್ದು, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ತಹಶೀಲ್ದಾರ್ ಮೋಹನಕುಮಾರಿ ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….