ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಗೌರವಧನ ಆಧಾರದ ಮೇಲೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದಾದಾರೂ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು, ಎಂ.ಎಸ್.ಡಬ್ಲ್ಯೂ, ಎಂ.ಎ. ವುಮೆನ್ ಸ್ಟಡೀಸ್ ವಿದ್ಯಾರ್ಹತೆ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಯು ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ 3-5 ವರ್ಷಗಳ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗೆ ಮಾಹೆಯಾನ ರೂ. 14,000 ಗಳ ಗೌರವಧನ ನೀಡಲಾಗುವುದು.
30 ವರ್ಷ ವಯೋಮಿತಿ ಒಳಗಿನವರಾಗಿದ್ದು, ಕಂಪ್ಯೂಟರ್ ಬಳಕೆ ಬಗ್ಗೆ ಪ್ರಾವಿಣ್ಯತೆ ಹೊಂದಿರುವ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಾಮಥ್ರ್ಯ ಹೊಂದಿರುವ ಅಭ್ಯರ್ಥಿಗಳು 2022ರ ಫೆಬ್ರವರಿ 15 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂ:206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಕಚೇರಿ ಸಂಖ್ಯೆ: 080-29787445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರಾದ ನಟರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….