ಬೆಂಗಳೂರು: ಕೋವಿಡ್ ವಸ್ತು ಸ್ಥಿತಿ ಅವಲೋಕಿಸಿ ಈಗಿರುವ ನಿಯಮಗಳನ್ನು ಸಡಿಲೊಸುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಕೋವಿಡ್ ನಿರ್ಬಂಧಗಳ ಸಡಿಲಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ,ಕೋವಿಡ್ ವಸ್ತುಸ್ಥಿತಿಯ ಅವಲೋಕನಕ್ಕಾಗಿ ಇಂದು ಸಭೆಯನ್ನು ಕರೆಯಲಾಗಿದೆ. ಕಳೆದ ಒಂದು ತಿಂಗಳಿನಿಂದ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿ ಕೋವಿಡ್ ನ ಪರಿಸ್ಥಿತಿಯನ್ನು ಪರಿಶೀಲಿಸಿ ಹಾಗೂ ತಜ್ಞರ ಸಮಿತಿ ವರದಿಯ ಆಧಾರದ ಮೇಲೆ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….