ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಯಿತು.
“ಮಹಾತ್ಮ ಗಾಂಧೀಜಿ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಎರಡು ನಿಮಿಷಗಳ ಕಾಲ ಮೌನಾಚರಣೆಯನ್ನು ಮಾಡಲಾಯಿತು. ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….