ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ನಡೆಯಿತು.
ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಸರ್ಕಾರಗಳು ಜಯಂತಿಗಳ ಆಚರಣೆಯೊಂದಿಗೆ ಶರಣರ ಜೀವನದ ಸಂದೇಶಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಿದೆ. 12 ನೇ ಶತಮಾನದಲ್ಲಿ ಜನಿಸಿದ ಮಡಿವಾಳ ಮಾಚಿದೇವರು ಮಹಾ ಶರಣರಾಗಿ ಅಗ್ರಗಣ್ಯರಾಗಿದ್ದರು. ಸಮಾಜದಲ್ಲಿನ ಅಸಮಾನತೆ, ಜಾತಿ ಬೇಧ, ಅಂತಃಕಲಹ ಮುಂತಾದ ಸಾಮಾಜಿಕ ಪಿಡುಗು ನಿವಾರಿಸಲು ಶ್ರಮಿಸಿದ ಮಹಾ ಮಾನವತಾವಾದಿಯಾಗಿದ್ದರು. ಬಸವಣ್ಣನವರ ಅನುಭವ ಮಂಟಪದಲ್ಲಿ ಮಾಚಿದೇವರ ಬಾಗವಹಿಸುವಿಕೆ ಮುಖ್ಯವಾಗಿತ್ತು. ಶರಣರು ಕೇವಲ ನುಡಿದವರಲ್ಲ ಅದರ ಬದಲಾಗಿ ನುಡಿದಂತೆ ನಡೆದು ಸಾರ್ಥಕ ಜೀವನವನ್ನು ನಡೆಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆಯಬೇಕಿದೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳ ಅಭಿವೃದ್ದಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು.ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಮಡಿವಾಳ ಸಮಾಜದ ಸಮುದಾಯ ಭನವಕ್ಕೆ 25 ಲಕ್ಷ ರೂ ನಿಗದಿಯಾಗಿತ್ತು. ಚುನಾವಣೆ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಅನುದಾನ ಈಗಿನ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಡಿವಾಳ ಸಮುದಾಯದ ಗಣ್ಯರನ್ನು ಸನ್ಮಾನಿಸಲಾಯಿತು.
ತಹಶೀಲ್ದಾರ್ ಮೋಹನ ಕುಮಾರಿ, ಎಪಿಎಂಸಿ ಅದ್ಯಕ್ಷ ವಿಶ್ವನಾಥ್, ತಾಲೂಕು ಮಡಿವಾಳ ಮಾಚಿದೇವ ಸಂಘದ ಅಧ್ಯಕ್ಷ ರಂಗಸ್ವಾಮಿ ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮುನಿಸ್ವಾಮಯ್ಯ ಸೇರಿದಂತೆ ಮಡಿವಾಳ ಸಮಾಜದ ಮುಖಂಡರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….