ದೊಡ್ಡಬಳ್ಳಾಪುರ: ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ದೊಡ್ಡಬಳ್ಳಾಪುರ ತಾಲ್ಲೂಕಿನ ಚೆನ್ನಾದೇವಿ ಅಗ್ರಹಾರ ಗ್ರಾಮದ ಜಾನಪದ ಕತೆಗಾರ ತಿಮ್ಮಯ್ಯ (85 ವರ್ಷ ) ಇಂದು ಮುಂಜಾನೆ ನೆಲಮಂಗಲ ತಾಲ್ಲೂಕಿನ ಹುರುಳಿಹಳ್ಳಿ ಗ್ರಾಮದಲ್ಲಿರುವ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ.
ಕಳೆದವಾರ ಇವರಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟಿಸಿತ್ತು. ಆದರೆ ಇನ್ನೂ ಪ್ರಶಸ್ತಿ ಪ್ರಧಾನ ನಡೆದಿಲ್ಲ.
ಮೃತರ ಅಂತ್ಯಕ್ರಿಯೆ ತಿಮ್ಮಯ್ಯ ಅವರ ಸ್ವಗ್ರಾಮ ಚೆನ್ನಾದೇವಿ ಅಗ್ರಹಾರ ಗ್ರಾಮದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ಜಾನಪದ ಕತೆಗಾರ ತಿಮ್ಮಯ್ಯ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು ಮತ್ತು ಚೆನ್ನಾದೇವಿ ಅಗ್ರಹಾರ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….