ದೊಡ್ಡಬಳ್ಳಾಪುರ: ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯವಾಗಿದ್ದು, ಶಾಲಾ ಕಾಲೇಜುಗಳಲ್ಲಿ ಕ್ರೀಡೆಗಳಲ್ಲಿ ಮಾಡಿದವರು ಮುಂದೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟುಗಳಾಗುವ ಅವಕಾಶವಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಕ್ರೀಡೆಗಳಿಗೂ ಆದ್ಯತೆ ನೀಡಬೇಕಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಮಹಿಳೆಯರ ಖೋ ಖೋ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೂ ಸಹ ಉದ್ಯೋಗ ಕ್ಷೇತ್ರದಲ್ಲೂ ಮೀಸಲಾತಿಗಳಿವೆ. ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ದೈಹಿಕ,ಮಾನಸಿಕ ಸದೃಢತೆಗಾಗಿ ಆಟವಾಡಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಎನ್.ಶ್ರೀನಿವಾಸಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್ ಮೊದಲಾದವರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….