Site icon Harithalekhani

ದೊಡ್ಡಬಳ್ಳಾಪುರ: ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ / ಶಿಕ್ಷಕರಿಗಾಗಿ ಕ್ರೀಡೆ, ಮನರಂಜನೆ, ಸಾಂಸ್ಕ್ರತಿಕ ಸ್ಪರ್ಧೆ ಆಯೋಜನೆ

ದೊಡ್ಡಬಳ್ಳಾಪುರ: ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ರವರ ಹುಟ್ಟುಹಬ್ಬ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ದ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸೆಪ್ಟ್ಂಬರ್ 5ರಂದು ನಡೆಯುವ ಶಿಕ್ಷಕರ ದಿನಾಚರಣೆಗಾಗಿ ತಾಲ್ಲೂಕಿನ ಶಿಕ್ಷಕರಿಗೆ ಕ್ರೀಡೆ, ಮನರಂಜನೆ, ಸಾಂಸ್ಕ್ರತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು

ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಇಓ ಆರ್.ರಂಗಪ್ಪ, ಹಾಕಿಮಾಂತ್ರಿಕ ಧ್ಯಾನ್ ಚಂದ್ ರ ಸಾಧನೆಗಳನ್ನು ಸ್ಮರಿಸಿದರು. ಶಿಕ್ಷಣದಲ್ಲಿ ಕ್ರೀಡೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳು ಪ್ರಮುಖ ಪಾತ್ರವನ್ನುವಹಿಸಿದ್ದು, ಶಿಕ್ಷಕರು ಇವುಗಳಲ್ಲಿ ಆಸಕ್ತಿಯಿಂದ ಭಾಗವಹಿಸಿರುವುದು ಸಂತಸ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಬಿ.ಆರ್.ಸಿ.ಹನುಮಂತಪ್ಪ ಹಿಂದಿನಮನಿ, ದೈಹಿಕಶಿಕ್ಷಣ ಸಂಯೋಜಕ ಸುನಿಲ್ ನಾಯಕ್, ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅದ್ಯಕ್ಷ ಜೈಕುಮಾರ್, ಕಾರ್ಯದರ್ಶಿ ವಸಂತಗೌಡ, ಖಜಾಂಚಿ ನರಸಿಂಹಮೂರ್ತಿ, ಸಹಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಅರುಣ್ ಕುಮಾರ್, ತಾಲ್ಲೂಕು ಅದ್ಯಕ್ಷ ಶಿವಕುಮಾರ್,  ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಬಿ.ಹೆಚ್.ನರಸಿಂಹಮೂರ್ತಿ ಬರಗೂರು, ತಾಲ್ಲೂಕು ಅದ್ಯಕ್ಷ ಜಿ.ಎಸ್.ಸಿದ್ದಲಿಂಗಯ್ಯ, ಕಾರ್ಯದರ್ಶಿ ವಿನುತ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾದ್ಯಕ್ಷ ಎಂ.ಎಸ್.ರಾಜಶೇಖರ್, ಧನಂಜಯ್,  ಎ.ವಿ.ಚಂದ್ರಶೇಖರ್, ಸೇರಿದಂತೆ ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version