ದೂಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿಯ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗಾಗಿ ವಿವಿಧ ಆಟೋಟಗಳನ್ನು ಏರ್ಪಡಿಸಲಾಗಿತ್ತು.
ಮ್ಯೂಸಿಕಲ್ ಛೇರ್, ಕ್ಯಾಪ್ ಲಿಪ್ಟ್ ಮೊದಲಾದ ಆಟಗಳನ್ನು ಪೋಷಕರು ಆಡುತ್ತಿದ್ದಾಗ ಮಕ್ಕಳು ವೀಕ್ಷಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ. ಆಯೋಜಕರು, ಕ್ರೀಡೆಗಳು ಮಕ್ಕಳಿಗಷ್ಟೇ ಅಲ್ಲದೇ ಪೋಷಕರಿಗೂ ಅಗತ್ಯವಾಗಿದ್ದು, ಒತ್ತಡದ ಬದುಕಿನಿಂದ ಹೊರಬಂದು ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದರು.
ವಿಜೇತರಾದವರಿಗೆ ಬಹುಮಾನಗಳನ್ನು ಎಜಾಕ್ಸ್ ಕಂಪನಿಯ ಮಾನವ ಸಂಪನ್ಮೂಲ ಅಕಾರಿ ಎನ್.ಎಸ್.ಗಣಪತಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಪ್ಪ , ಎಜಾಕ್ಸ್ ಕಂಪನಿಯ ಸಿಎಸ್‍ಆರ್ ಅಧಿಕಾರಿ ಮಂಜುನಾಥ್, ಶಾಲೆಯ ಮುಖ್ಯಶಿಕ್ಷಕಿ ಆರ್.ರಾಜೇಶ್ವರಿ, ಶಿಕ್ಷಕ ರಾಜಶೇಖರ್, ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಮುನಿಯಪ್ಪ, ಉಪಾಧ್ಯಕ್ಷೆ ಕಲಾವತಿ, ಸದಸ್ಯರಾದ ಆನಂದ್, ಶಶಿಕಿರಣ್, ಬಸವರಾಜ್, ಯುವರಾಣಿ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….