ಬೆಂಗಳೂರು: ಕ್ರೀಡೆಯಿಂದ ದೇಹದ ಆರೋಗ್ಯ ಚೆನ್ನಾಗಿರುತ್ತೆ ಹಾಗೂ ಶಿಸ್ತು ಬೆಳೆ ಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಮಲ್ಲೇಶ್ವರಂನ ಸೇನಾಪತಿ ಚಂದ್ರಶೇಖರ್ ಅಜಾದ್ ಆಟದ ಮೈದಾನದಲ್ಲಿ ಶ್ರೀ ನರೇಂದ್ರ ಮೋದಿಯವರ 72ನೇ ಜನ್ಮದಿನಾಚರಣೆ ಪ್ರಯುಕ್ತ ಬಿಜೆಪಿ ರೈತ ಮೋರ್ಚಾ ಆಯೋಜಿಸಿದ್ದ “ನಮೋ ಕಿಸಾನ್ ಕಪ್ 2022” ಕಬಡ್ಡಿ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ “ಸೇನಾಪತಿ ಚಂದ್ರಶೇಖರ್ ಅಜಾದ್ ಕ್ರೀಡಾಂಗಣ” ಉದ್ಘಾಟನೆ ಮಾಡಿದ ಮುಖ್ಯಮಂತ್ರಿಗಳು, ನಮೋ (ನರೇಂದ್ರ ಮೋದಿ) ಹೆಸರಲ್ಲೇ ಸ್ಫೂರ್ತಿ ಇದೆ. ಇದನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಬೆಳೆಸಿ ಎಂದು ಆಟಗಾರರಿಗೆ ಸಲಹೆ ನೀಡಿದರು. ನಮ್ಮ ಸರ್ಕಾರ ಗ್ರಾಮೀಣ ಕ್ರೀಡೆಗಳಾದ ಕಬ್ಬಡ್ಡಿ, ಖೊಖೊ, ಕುಸ್ತಿ, ಎತ್ತಿನ ಗಾಡಿ ಓಟದ ಸ್ಪರ್ಧೆ ಮತ್ತು ಕರಾವಳಿ ಕಂಬಳವನ್ನು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದ ವರೆಗೂ ಅಧಿಕೃತ ಮಾಡಿದೆ. ಎಲ್ಲರೂ ಇದರಲ್ಲಿ ಹೆಚ್ಚಾಗಿ ಪಾಲ್ಗೊಳ್ಳಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ, ಪರಿಷತ್ ಸದಸ್ಯರಾದ ನಾರಾಯಣ ಸ್ವಾಮಿ, ರವಿ ಕುಮಾರ್ ಹಾಗೂ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….