ಕ್ರೀಡೆಗಳು ಜೀವನದ ಸೋಲು ಗೆಲವುಗಳ ದಾಟಿ ಯಶಸ್ಸು ಸಾಧಿಸುವ ಪ್ರೇರಣೆಯನ್ನು ಕಲಿಸುತ್ತವೆ: ಇಒ ಶ್ರೀನಾಥ್ ಗೌಡ

ದೊಡ್ಡಬಳ್ಳಾಪುರ, (ನ.25): ಜೀವನದ ಸೋಲು ಗೆಲವುಗಳ ದಾಟಿ ಯಶಸ್ಸು ಸಾಧಿಸುವ ಪ್ರೇರಣೆಯನ್ನು ಕ್ರೀಡೆಗಳು ಕಲಿಸುತ್ತವೆ, ಕ್ರೀಡೆಗಳಲ್ಲಿ ಭಾಗವಹಿಸುದರ ಮೂಲಕ ಪ್ರತಿಯೊಬ್ಬರೂ ತಮ್ಮ ದೇಹ ಹಾಗೂ ಮನಸ್ಸನ್ನು ಸಧೃಡಗೊಳಿಸಬಹುದು ಎಂದು ತಾಲೂಕು ಪಂಚಾಯಿತಿ ಇಒ ಶ್ರೀನಾಥ್ ಗೌಡ ಹೇಳಿದರು.

ಇಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿಯ ಸಹಯೋಗದೊಂದಿಗೆ ನವೆಂಬರ್ 25 ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಪ್ರಥಮವಾಗಿ ಗ್ರಾಮೀಣ ಕ್ರೀಡಾಕೂಟವನ್ನು ಇಂದು ಅಯೋಜಿಸಲಾಗಿದೆ, ರಾಜ್ಯದ ದೇಸೀ, ಜಾನಪದ ಮತ್ತು ಸ್ಥಳೀಯ ಕ್ರೀಡೆಗಳಾದ ಕಬಡ್ಡಿ ಕೊಕ್ಕೊ, ಎತ್ತಿನ ಬಂಡಿ, ಕುಸ್ತಿಯಂತಹ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು,  ಇದರ ಸದುಪಯೋಗ ಪಡೆದುಕೊಳ್ಳಬೇಕು, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೊಂಡು, ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವ ಮೂಲಕ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರುವ ಕೆಲಸ ಮಾಡಿ ಎಂದು ಕರೆ ನೀಡಿದರು..

ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಕ್ರೀಡಾಪಟುಗಳಿಗೆ ಶುಭಕೋರಿದರು.

ಈ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ  ಗೀತಾ, ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ, ಸಹಾಯಕ ನಿರ್ದೇಶಕ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ನರಸಿಂಹಮೂರ್ತಿ ಬರಗೂರು ಸೇರಿದಂತೆ ಪಿಡಿಓಗಳು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮೀಣ ಕ್ರೀಡಾಪಟುಗಳು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….)?$/gm,"$1")],{type:"text/javascript"}))}catch(e){d="data:text/javascript;base64,"+btoa(t.replace(/^(?:)?$/gm,"$1"))}return d}