Site icon Harithalekhani

ದೊಡ್ಡಬಳ್ಳಾಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ರೋಡ್ ಶೋ: ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿ ನಾಗರಕೆರೆ ಅಭಿವೃದ್ಧಿ – ಸಿಎಂ ಭರವಸೆ

ದೊಡ್ಡಬಳ್ಳಾಪುರ, (ಏ.23): ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದರು.

ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. 

ಕಾಂಗ್ರೆಸ್ ಕಾಲದಲ್ಲಿ ನೇಕಾರರು ಅನೇಕ ಸಮಸ್ಯೆ ಎದುರಿಸಿದ್ದರು. ನೇಕಾರ ಸಮ್ಮಾನ ಯೋಜನೆಯನ್ನು ನಮ್ಮ ನಾಯಕರಾದ ಯಡಿಯೂರಪ್ಪ ಅರಂಭಬಿಸಿದರು‌. 2000 ರೂ ನೇಕಾರರಿಗೆ ಧನ ಸಹಾಯ ನೀಡಲಾಗುತ್ತಿತ್ತು‌. ಅದನ್ನು 5000ಕ್ಕೆ ಹೆಚ್ಚಳ ಮಾಡಿದ್ದೇನೆ‌. 5 ಲಕ್ಷದ ವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಲಾಗುತ್ತಿದೆ. ನೇಕಾರರ ಅಭಿವೃದ್ಧಿ ನಿಗಮ ಮಾಡಿದ್ದೇವೆ. ನೇಕಾರರ ಆರೊಗ್ಯ, ಶಿಕ್ಷಣ ನೀಡಲು ನೇಕಾರರ ಅಭಿವೃದ್ಧಿ ನಿಗಮ ಮಾಡಿದ್ದೇವೆ ಎಂದರು.

ಹೂವು ಹಣ್ಣು ವ್ಯಾಪಾರ ಮಾಡುವ ತಿಗಳ ಸಮುದಾಯ ಇದೆ. ಆ ಸಮುದಾಯದ ಅಭಿವೃದ್ಧಿ ಗೆ ನಿಗಮ, ಗಾಣೀಗೆರ ಅಭಿವೃದ್ಧಿ ನಿಗಮ, ಕಾಯಕ ಮಾಡುವ ಕುಲಗಳಿಗೆ ಅಭಿವೃದ್ಧಿ ನಿಗಮ ಮಾಡಿದ್ದೇವೆ. ಒಕ್ಕಲಿಗರ ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದೇವೆ. ಎಲ್ಲ ಸನುದಾಯಗಳ ಅಭಿವೃದ್ಧಿಯನ್ನು ನಮ್ಮ ಸರ್ಕಾರ ಮಾಡಿದೆ ಎಂದರು.

ದೊಡ್ಡಬಳ್ಳಾಪುರದಲ್ಲಿ ಸೆಟಲೈಟ್ ಟೌನ್ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಶಿಕ್ಷಣ ಉದ್ಯೋಗ ದೊರೆಯುತ್ತವೆ. ಬೆಂಗಳೂರಿನ ಎಲ್ಲ ಸೌಕರ್ಯ ದೊಡ್ಡಬಳ್ಳಾಪುರದಲ್ಲಿ ಸಿಗುವಂತೆ ಮಾಡುತ್ತೇವೆ. ಹಾಲಿ ಶಾಸಕರು ಹತ್ತು ವರ್ಷ ಶಾಸಕರಾಗಿದ್ದಾರೆ. ಅವರನ್ನು ಈ ಬಾರಿ ಮನೆಗೆ ಕಳಿಸಬೇಕು. ದೊಡ್ಡಬಳ್ಳಾಪುರ ಅಭಿವೃದ್ಧಿಗೆ ಧೀರಜ್ ಗೆ ಅವಕಾಶ ಕಲ್ಪಿಸಬೇಕು. ಮತ್ತೆ ನಮ್ಮ ಸರ್ಕಾರ ರಚನೆಯಾಗುತ್ತದೆ. ಈ ಭಾಗದಲ್ಲಿ ಕೆರೆ ಅಭಿವೃದ್ಧಿ ಮಾಡಬೇಕೆಂದು ಜನರ ಬೇಡಿಕೆ ಇದೆ‌. ಅದನ್ನು ಸಂಪುಟದ ಮೊದಲ ಸಭೆಯಲ್ಲಿಯೇ ತೀರ್ಮಾನ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಯಲಹಂಕ ಬಿಜೆಪಿ ಅಭ್ಯರ್ಥಿ ಎಸ್.ಆರ್.ವಿಶ್ವನಾಥ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅಭ್ಯರ್ಥಿ ಧೀರಜ್ ಮುನಿರಾಜು,  ಮತ್ತಿತರರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version