ಬೆಂಗಳೂರು, (ಏ.26): ಒಕ್ಕಲಿಗರ ಕೋಟೆಯಲ್ಲಿ ಕಮಲ ಅರಳಿಸಲು ಮುಂದಾಗಿರುವ ಬಿಜೆಪಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಇಂದು ರಾಜ್ಯಕ್ಕೆ ಬರಮಾಡಿಕೊಂಡು ಪ್ರಚಾರ ನಡೆಸಲು ಮುಂದಾಗಿದೆ.
ಲಖನೌನಿಂದ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮಂಡ್ಯದಲ್ಲಿ ನಡೆಯುವ ರೋಡ್ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 2.40ಕ್ಕೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಬಸವೇಶ್ವರರ ದರ್ಶನ ಪಡೆದು ಮಧ್ಯಾಹ್ನ 3.05ಕ್ಕೆ ಬಸವನಬಾಗೇವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಪರ ಪ್ರಚಾರ ಮಾಡಲಿದ್ದಾರೆ.
ಇದಾದ ನಂತರ ಸಂಜೆ 4.50ಕ್ಕೆ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು ಇಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ್ ಪರ ಮತಯಾಚಿಸಲಿದ್ದಾರೆ. ಸಮಾವೇಶ ಮುಗಿದ ಬಳಿಕ ಉತ್ತರ ಪ್ರದೇಶದ ಲಖನೌಗೆ ನಿರ್ಗಮಿಸುತ್ತಾರೆ ಎನ್ನಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….