ದೊಡ್ಡಬಳ್ಳಾಪುರ, (ಮೇ.26): ಹೋಮ್ ಲೋನ್ ಕಚೇರಿಯಲ್ಲಿ ಸಿಬ್ಬಂದಿಯೋರ್ವ ನೇಣು ಬಿಗಿದುಕೊಂಡು ಸಾವನಪ್ಪಿರುವ ಘಟನೆ ರೈಲ್ವೆ ನಿಲ್ದಾಣದ ಬಳಿ ಸಂಭವಿಸಿದೆ.
ಮೃತನನ್ನು ಕೊಯಿರಾ ಗ್ರಾಮದ ಮುರುಳಿಧರ್ (50 ವರ್ಷ) ಎಂದು ಗುರುತಿಸಲಾಗಿದ್ದು, ಈತ ರೈಲ್ವೇ ನಿಲ್ದಾಣದ ಬಳಿಯಿರುವ ಮಾಶ್ರೀ ಹೋಮ್ ಲೋನ್ ಕಚೇರಿಯಲ್ಲಿ ಅಡ್ವೈಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ನೇಣು ಬಿಗಿದುಕೊಂಡು ಮೂರ್ ನಾಲ್ಕು ದಿನಗಳಾಗಿದ್ದು, ಘಟನೆ ಇಂದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….