ನೂತನ ಸಂಸತ್ ಭವನ ಉದ್ಘಾಟನೆ: ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು, (ಮೇ.26): ನೂತನ ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದ್ದು, ತನ್ನ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಅಲ್ಲದೆ, ಕಾಂಗ್ರೆಸ್ ಇವತ್ತು ಆದಿವಾಸಿ ಮಹಿಳೆ ಎಂಬ ಕಾರಣಕ್ಕೆ ಮಾನ್ಯ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಅದೇ ಆದಿವಾಸಿ ಮಹಿಳೆ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಗಿದ್ದಾಗ ಕಾಂಗ್ರೆಸ್ ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿ ಮಾಡಿದ್ದು ಯಾಕೆ ಎಂದು ಖಾರವಾಗಿ ಪ್ರಶ್ನೆ ಮಾಡಿದರು.

ಸಂಸತ್ ಭವನ ಉದ್ಘಾಟನೆಗೆ 21 ಪಕ್ಷಗಳು ಬಹಿಷ್ಕಾರ ಹಾಕಿವೆ. ಅದು ಆಯಾ ಪಕ್ಷದ ನಿಲವು. ಸಂಸತ್ ಭವನ ಯಾವುದೋ ಪಕ್ಷದ ಸಂಘಟನೆಗೆ ಸೀಮಿತವಾದ ಭವನ ಅಲ್ಲ. ದೇಶದ ಜನರ ತೆರಿಗೆ ಹಣದಿಂದ ಕಟ್ಟಿರುವ ಭವನ ಅದು. ರಾಷ್ಟ್ರಪತಿ ಗಳಿಂದ ಉದ್ಘಾಟನೆ ಆಗಬೇಕಿತ್ತು ಅನ್ನುವ ವಿಚಾರ ತೆಗೆದು ಕಾಂಗ್ರೆಸ್ ಬಹಿಷ್ಕಾರ ಮಾಡಲು ಮುಂದಾಗಿದೆ. ಇದೇ ಕಾಂಗ್ರೆಸ್ ಪಕ್ಷ ಛತ್ತೀಸಗಢದಲ್ಲಿ ವಿಧಾನಸಭಾ ಕಟ್ಟಡದ ಉದ್ಘಾಟನೆ ಮಾಡಲು ಸೋನಿಯಾ ಗಾಂಧಿ ಅವರಿಂದ ಅಡಿಗಲ್ಲು ಹಾಕಿಸಿತ್ತು. ಅಲ್ಲಿ ರಾಷ್ಟ್ರಪತಿ ಅವರು ನೆನಪಿಗೆ ಬರಲಿಲ್ಲವೇ? ಎಂದು ಅವರು ಕೇಳಿದರು.

ಕರ್ನಾಟಕದಲ್ಲಿ ವಿಕಾಸಸೌಧ ಉದ್ಘಾಟನೆ ಮಾಡಲು ರಾಷ್ಟ್ರಪತಿಗಳನ್ನು ಕರೆದಿದ್ದಾರಾ ಕಾಂಗ್ರೆಸ್ ನಾಯಕರು? ಅಂದು ಮುಖ್ಯಮಂತ್ರಿ, ಲೋಕೋಪಯೋಗಿ ಸಚಿವರೇ ವಿಕಾಸಸೌಧವನ್ನು ಉದ್ಘಾಟನೆ ಮಾಡಲಿಲ್ಲವೇ? ಈಗ ನೋಡಿದರೆ ಆದಿವಾಸಿ ಮಹಿಳೆಯನ್ನು ಕಡೆಗಣಿಸಿದ್ದಾರೆ ಅಂತಾ ನಾಟಕ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಕುಟುಕಿದರು.

ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ ಕಳಿಸಿದ್ದಾರೆ. ಹಾಗಾಗಿ ದೇವೇಗೌಡರು ಈ ಕಾರ್ಯಕ್ರಮಕ್ಕೆ ಹೋಗುಟ್ಟಿದ್ದಾರೆ. ಇದರಿಂದ ಬಿಜೆಪಿ ಬಗ್ಗೆ ಜೆಡಿಎಸ್ ಮೃದುಧೋರಣೆ ಅಂತಾ ತಿಳಿಯುವ ಅಗತ್ಯ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿಗಳು ಆಗಿರುವ ಹೆಚ್.ಡಿ.ದೇವೇಗೌಡರು ಭಾಗಿಯಾಗುವುದಕ್ಕೆ ಗುರುವಾರ ನಗರದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದ ಸಹಮತ ವ್ಯಕ್ತಪಡಿಸಲಾಯಿತು.

ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇಶದ ಹಲವಾರು ರಾಜಕೀಯ ಪಕ್ಷಗಳು ಬಹಿಷ್ಕಾರ ಹಾಕಿರುವ ಹಿನ್ನೆಲೆಯಲ್ಲಿ ಈ ವಿಷಯದ ಬಗ್ಗೆ ಕಾರ್ಯಕಾರಿಣಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ತಿಳಿಸಿದರು.

ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಹಾಲಿ ಪ್ರಧಾನಿಗಳು ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಜರಾಗುವುದು ತಪ್ಪೇನಲ್ಲ. ಆದರೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನ ಅಂತರ ಕಾಯ್ದುಕೊಳ್ಳಲಾಗುವುದು ಹಾಗೂ ಪಕ್ಷದ ಸೈದ್ಧಾಂತಿಕ ನಿಲುವಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕಾರ್ಯಕಾರಿಣಿ ಸ್ಪಷ್ಟಪಡಿಸಿದೆ ಎಂದು ಅವರು ಮಾಹಿತಿ ನೀಡಿದರು.

ಹಾಗೆಯೇ, ಸಂಸತ್ ಭವನ ಉದ್ಘಾಟನೆ, ಅದರ ಸುತ್ತಮುತ್ತ ನಡೆಯುವ ಬೆಳವಣಿಗೆಗಳ ಕುರಿತು ಹಾಗೂ ತಾವು ಭಾಗಿಯಾಗುವ ವಿಷಯದಲ್ಲಿ ಮಾಜಿ ಪ್ರಧಾನಿಗಳು ಕಾರ್ಯಕಾರಿಣಿಯಲ್ಲಿ ಸಮಾಲೋಚನೆ ನಡೆಸಿದರು ಎಂಬುದಾಗಿ ಅವರು ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆಗೂ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಮಾಲೋಚನೆ ನಡೆಸಿತು. ಹಾಗೆಯೇ, ಪಕ್ಷದ ಸದಸ್ಯ ತ್ವ ನೊಂದಣಿ ವಿಚಾರದಲ್ಲಿ, ಕೇರಳ ನಾಯಕರು ಹೆಚ್ಚು ಆದ್ಯತೆ ಕೊಡಬೇಕು ಎಂದು ಸಲಹೆ ಮಾಡಿದರು. ಅದಕ್ಕೂ ಕಾರ್ಯಕಾರಿಣಿ ಒಪ್ಪಿಗೆಯ ಮುದ್ರೆ ಒತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ರೈತರ ಪರವಾಗಿ ಮಾಜಿ ಪ್ರಧಾನಿಗಳ ಹೋರಾಟ: ದೇಶದ ಉದ್ದಗಲಕ್ಕೂ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸೂಕ್ತ ಬೆಲೆ, ಸಬ್ಸಿಡಿ, ರಸಗೊಬ್ಬರ ಸಮಸ್ಯೆ,  ಇತ್ಯಾದಿ ಸೌಲಭ್ಯ ಸಿಗದೆ ಕಂಗಾಲಾಗಿದ್ದಾರೆ. ಹೀಗಾಗಿ ದೇಶಾದ್ಯಂತ ರೈತರ ಪರವಾಗಿ ಬೃಹತ್ ಹೋರಾಟವನ್ನು ದೇವೇಗೌಡರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ರೂಪಿಸಬೇಕು ಎಂದು ಕೇರಳದ ಜೆಡಿಎಸ್ ಪಕ್ಷದ ಹಿರಿಯ ಶಾಸಕರು ಹಾಗೂ ಸಚಿವರೂ ಆಗಿರುವ ಕೃಷ್ಣನ್ ಕುಟ್ಟಿ ಅವರು ನಿರ್ಣಯ ಮಂಡಿಸಿದರು. ಈ ನಿರ್ಣಯಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದ ಒಪ್ಪಿಗೆ ನೀಡಿತು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಕೇರಳ, ತೆಲಂಗಾಣ, ತಮಿಳುನಾಡು, ಆಂದ್ರ ಪ್ರದೇಶದ ನಾಯಕರು, ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನೆಡೆ ಆಗಿರುವುದರಿಂದ ಕುಮಾರಸ್ವಾಮಿ ಅವರು ಎದೆಗುಂದಬಾರದು ಎಂದು ನನಗೆ ಧೈರ್ಯ ಹೇಳಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು. ಸದಾ ನನ್ನ ಜತೆ ನಿಲ್ಲುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದ ವಿಧಾನಸಭೆ ಚುನಾವಣೆ ಫಲಿತಾಂಶ, ಪಕ್ಷದ ಸಂಘಟನೆ ಹಾಗೂ ಮಹತ್ವದ ರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಲಾಯಿತು ಎಂದು ಅವರು ಮಾಹಿತಿ ನೀಡಿದರು.

ದೇಶದ ಬೆಳವಣಿಗೆಗಳ ಬಗ್ಗೆ ಹಾಗೂ ಪಕ್ಷದ ಸಂಘಟನೆ ಹಿತದೃಷ್ಟಿಯಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಎರಡು ತಿಂಗಳಿಗೆ ಒಮ್ಮೆ ಕರೆಯುವಂತೆ ನಮ್ಮ ಪಕ್ಷದ ಕೇರಳ ರಾಜ್ಯದ ಹಿರಿಯ ನಾಯಕರಾದ ಡಾ. ನೀಲ ಲೋಹಿದಾಸ್ ನಾಡಾರ್ ಅವರು ಸಲಹೆ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಕೈಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಕಾರ್ಯಕಾರಿಣಿಯಲ್ಲಿ ಕೇರಳದ ಸಚಿವರೂ, ಪಕ್ಷದ ಹಿರಿಯ ನಾಯಕರಾದ ಕೃಷ್ಣನ್ ಕುಟ್ಟಿ, ಕೇರಳ ರಾಜ್ಯಾಧ್ಯಕ್ಷ ಹಾಗೂ ಶಾಸಕ ಮ್ಯಾಥ್ಯೂ ಥಾಮಸ್, ತಮಿಳುನಾಡು ರಾಜ್ಯಾಧ್ಯಕ್ಷ ಪೊನ್ನುಸ್ವಾಮಿ ಸೇರಿದಂತೆ ಆಂಧ್ರ, ಒರಿಸ್ಸಾ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಉತ್ತರಾಖಂಡ ಮುಂತಾದ ರಾಜ್ಯಗಳ ಪ್ರತಿನಿಧಿಗಳು ಕಾರ್ಯಕಾರಿಣಿಯಲ್ಲಿ ಭಾಗಿಯಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕರ್ನಾಟಕ, ಕೇರಳ, ಕರ್ನಾಟಕ, ತಮಿಳುನಾಡು, ತೆಲಂಗಾಣ ಹಾಗೂ ಆಂಧ್ರ ಪ್ರದೇಶದ ಪ್ರತಿನಿಧಿಗಳು, ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಜೆಡಿಎಸ್ ನಗರ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಬಾಗಲಕೋಟೆ ಜಿಲ್ಲಾಧ್ಯಕ್ಷ ಹನುಮಂತಪ್ಪ ಮಾವಿನಮರದ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!