ಬೆಂಗಳೂರು, (ಮೇ 25): ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅನುಗುಣವಾಗಿ 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅನುಮತಿ ನೀಡಿ ಆದೇಶ ಹೊರಡಿಸಿದೆ.
2023-24ನೇ ಶೈಕ್ಷಣಿಕ ವರ್ಷವು ಮೇ 29ರಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ 6ರಿಂದ 8ನೆ ತರಗತಿಗೆ ನೇಮಕ ಮಾಡಿರುವ 13,352 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕವಾಗುವ ತನಕ ಅಥವಾ ಶೈಕ್ಷಣಿಕ ವರ್ಷದ ಅಂತ್ಯದ ವರೆಗೆ ಎಂಬ ಷರತ್ತು ವಿಧಿಸಿ ನೇಮಕ ಮಾಡಿಕೊಳ್ಳುವಂತೆ ಜಿಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
2022-23ನೆ ಸಾಲಿನಲ್ಲಿ ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಗುರುತಿಸುವ ಮತ್ತು ಮರು ಹೊಂದಾಣಿಕೆ ಪ್ರಕ್ರಿಯೆಯನ್ನು ಈಗಾಗಲೇ ಜಿಲ್ಲಾ ಹಂತದಲ್ಲಿ ನಿಯಮಾನುಸಾರ ಕೈಗೊಳ್ಳಲಾಗಿದೆ. ಇದರ ಆಧಾರದಲ್ಲಿ ಖಾಲಿ ಹುದ್ದೆಗಳಿರುವ ಕಡೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ ಇಲಾಖೆ ತಿಳಿಸಿದೆ.
ಆದ್ಯತೆ ಮೇರೆಗೆ ತ್ವರಿತವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಜಿಲ್ಲಾ ಉಪ ನಿರ್ದೇಶಕರು ತಾಲ್ಲೂಕುವಾರು ಹುದ್ದೆಗಳ ಮರು ಹಂಚಿಕೆಯನ್ನು ಮೇ.26ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಇಲಾಖೆ ಹೇಳಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….