ದೊಡ್ಡಬಳ್ಳಾಪುರ, (ಮೇ.27): ಶನಿವಾರ ಬೆಳಗ್ಗೆಯಷ್ಟೇ ಸಚಿವರಾಗಿ ಅಧಿಕಾರ ಸ್ವೀಕರಿಸಿ, ಸಚಿವರಾದ ಡಾ.ಪರಮೇಶ್ವರ್ ಅವರು ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಪರಿಚಿತರೊಬ್ಬರ ಮದುವೆಯ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಬಂದ ಸಚಿವ ಡಾ.ಪರಮೇಶ್ವರ್, ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹರೀಶ್ ಕುಮಾರ್, ವಿಶ್ವನಾಥಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಾಗಪ್ಪ, ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಸರಸ್ವತಮ್ಮ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….