ನವದೆಹಲಿ, (ಮೇ.28): ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬಿದ ಬೆನ್ನಲ್ಲೇ ಆಧುನಿಕ ಸ್ಪರ್ಶದೊಂದಿಗೆ ಹೊಸ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಮಾಡಿದರು.
ಬೆಳಗ್ಗೆ 7.25ರ ಸುಮಾರಿಗೆ ಮೋದಿ ನೂತನ ಸಂಸತ್ ಭವನಕ್ಕೆ ಆಗಮಿಸಿದ್ದು, ಪೂಜಾ ಕೈಂಕರ್ಯ ನಡೆಸಿದರು. ಶೃಂಗೇರಿ ಶಾರದಾ ಪೀಠದ ಪುರೋಹಿತರು ಈ ಪೂಜಾ ಕೈಂಕರ್ಯ ನಡೆಸುತ್ತಿರುವುದು ವಿಶೇಷವಾಗಿತ್ತು.
ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಬಳಿಕ ಪ್ರಧಾನಿ ಮೋದಿ ಹೋಮ ಹವನ ನಡೆಸಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಾಥ್ ನೀಡಿದರು. ಗಣಪತಿ ಹೋಮವನ್ನೂ ಸಹ ಪ್ರಧಾನಿ ಮೋದಿ ಮಾಡಿದ್ದಾರೆ.
ನಂತರ ವೇದ ಮಂತ್ರ ಉಚ್ಛಾರಣೆಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನದಲ್ಲಿ ಸೆಂಗೋಲ್ ಅನ್ನು ಪ್ರತಿಷ್ಠಾಪಿಸಿದರು.
ಮಧ್ಯಾಹ್ನದವರೆಗೂ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ಹಾಗೂ ಪೂಜಾ ಕೈಂಕರ್ಯಗಳೊಂದಿಗೆ ಸಾಂಸ್ಕೃತಿಕವಾಗಿ ನಡೆದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….