ಬೆಂಗಳೂರು, (ಜೂ,03): ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕಾಯ್ದೆಯ ಪ್ರತಿಯನ್ನು ತರಿಸಿಕೊಂಡು ಅಧ್ಯಯನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ವಕೀಲರ ಸಂಘಕ್ಕೆ ಶಾಶ್ವತವಾದ ಸ್ಥಳವಿಲ್ಲವಾಗಿದ್ದು, ಪ್ರಸ್ತುತ ಪ್ರೆಸ್ ಕ್ಲಬ್ ಬಳಿ ಇರುವ ಸ್ಥಳದಲ್ಲಿಯೇ ಶಾಶ್ವತವಾಗಿ ಸ್ಥಳಾವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….