JDS ಪದಾಧಿಕಾರಿಗಳ ಬದಲಾವಣೆ: ಛಲದಿಂದ ಪಕ್ಷ ಕಟ್ಟುವ ಸಮರ್ಥರಿಗೆ ಅವಕಾಶ: ಮಾಜಿ‌ ಸಿಎಂ ಕುಮಾರಸ್ವಾಮಿ

ಬೆಂಗಳೂರು, (ಜೂ.09): ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಕಲ್ಪದೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಾಲ್ಕನೇ ದಿನವೂ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜಿಲ್ಲಾ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದರು.

ಪಕ್ಷದ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಬದಲಾವಣೆ ಮಾಡುತ್ತೇವೆ. ಯುವಜನರಿಗೆ ಆದ್ಯತೆ ನೀಡುತ್ತೇವೆ. ಪಕ್ಷ ಕಟ್ಟುವ ಎಲ್ಲಾ ಉತ್ಸಾಹಿಗಳಿಗೆ ಅವಕಾಶ ಕೊಡುತ್ತೇವೆ. ಬದ್ಧತೆಯಿಂದ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು. ಮುಂದಿನ ಚುನಾವಣೆಗಳನ್ನು  ಜಿಲ್ಲಾ, ತಾಲೂಕು, ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆ ಖಚಿತ ಎಂದು ಹೇಳಿದರು.

ಪಕ್ಷವನ್ನು ಮತ್ತೆ ಕಟ್ಟುತ್ತೇವೆ. ಎದೆಗುಂದುವ ಪೈಕಿ ನಾವಲ್ಲ. ಬದ್ಧತೆ, ಪಕ್ಷ ಕಟ್ಟುವ ಛಲ, ಪ್ರಾಮಾಣಿಕ ಕಾರ್ಯಕರ್ತರಿಗೆ ಅವಕಾಶ ಕೊಡಲಾಗುವುದು. ನಾನು ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತೇನೆ. ಜಿಲ್ಲೆಗಳಲ್ಲಿ ಸಭೆ ಮಾಡಿ ಜಿಲ್ಲಾ ಘಟಕಗಳಿಗೆ ಸರಿಯಾದ ಚಿಕಿತ್ಸೆ ಕೊಡಲಾಗುವುದು. ಪಕ್ಷ ಸಂಘಟನೆ ಮಾಡದಿರುವ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತೇವೆ. ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡಲಾಗದವರನ್ನು ಬದಲಾವಣೆ ಮಾಡಲಾಗುವುದು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಪಕ್ಷದಲ್ಲಿ ನಾಯಕರಾಗಿ ಬೆಳೆಯುವ ಯುವಜನರಿಗೆ ಅವಕಾಶ ಕೊಡುತ್ತೇವೆ. ಮುಂದಿನ ದಿನಗಳಲ್ಲಿ ಯುವ ಜನರನ್ನು ಪಕ್ಷಕ್ಕೆ ಹೆಚ್ಚು ಹೆಚ್ಚಾಗಿ ಸೇಳೆಯಲಾಗುವುದು ಎಂದ ಅವರು; ಪದಾಧಿಕಾರಿ ಆದಾಕ್ಷಣ, ಶಾಸಕರಾದಕ್ಷಣ, ಮಂತ್ರಿ ಆದಾಕ್ಷಣ ನಾಯಕರಾಗಿ ಬೆಳೆಯಲಾಗದು. ಜನರ ಜತೆ ಇದ್ದು ಹೋರಾಟ ನಡೆಸಿದರೆ ಮಾತ್ರ ನಾಯಕರಾಗುತ್ತೇವೆ ಎಂದು  ಜಿಲ್ಲಾಧ್ಯಕ್ಷರುಗಳಿಗೆ ಕಿವಿಮಾತು ಹೇಳಿದರು.

ಸಂಘಟನೆ ಬಗ್ಗೆ ನಿರ್ಲಕ್ಷ್ಯ ಸಲ್ಲ, ಅಂಥವರಿಗೆ ಅವಕಾಶ ಇಲ್ಲ. ಎಷ್ಟು ದಿನಾಂತ ಇಂಥವರನ್ನು ಸಹಿಸಿಕೊಳ್ಳುವುದು. ಬದಲಾವಣೆಗೆ ಇದು ಸೂಕ್ತ ಸಮಯ. ಹಿರಿಯರು ಕೂಡ ಕಿರಿಯರಿಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಿ ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್, ಶಾಸಕರಾದ ನೇಮಿರಾಜ್ ನಾಯಕ್, ರಾಜುಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಸೇರಿದಂತೆ ಆಯಾ ಜಿಲ್ಲೆಗಳ ಅಧ್ಯಕ್ಷರು, ಹಿರಿಯ ನಾಯಕರು, ಶಾಸಕರು, ಅಭ್ಯರ್ಥಿಗಳು ಭಾಗಿಯಾಗಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬಮೂಲ್ ಚುನಾವಣೆ: ಜೆಡಿಎಸ್ ಆಕ್ಟೀವ್.. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆ

ಬಮೂಲ್ ಚುನಾವಣೆ: ಜೆಡಿಎಸ್ ಆಕ್ಟೀವ್.. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆ

ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ನಿರ್ದೇಶಕರ ಅಭ್ಯರ್ಥಿ ಆಯ್ಕೆಯ ಸಂಬಂಧಿಸಿದ ಪೂರ್ವಭಾವಿ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪಾಲ್ಗೊಂಡರು.

[ccc_my_favorite_select_button post_id="105797"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಮಗಳು ಧನುಶ್ರೀಗೆ ಈಜು ಕಲಿಸಲು ಹೋಗಿದ್ದ ತಂದೆ ಕೆರೆಯಲ್ಲಿ ಮುಳುಗಿ ಮಗಳೊಡನೆ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ swimming

[ccc_my_favorite_select_button post_id="105788"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!