ಧರಣಿ‌ ಮಾಡಲು ಯಡಿಯೂರಪ್ಪರಿಗೆ ಯಾವ ನೈತಿಕತೆ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜೂ.24): ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಮಾಧ್ಯಮದವವರೊಂದಿಗೆ  ಮಾತನಾಡಿದರು.

ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ.   ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ. ಇನ್ನು ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಈಗಾಗಲೇ  2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ಕರೆದು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು. 

ಬಿತ್ತನೆಗೆ ಸಿದ್ಧ: ಮಳೆ ಯಾವಾಗ ಬಂದರೂ ಬಿತ್ತನೆ ಮಾಡಲು ತಯಾರಾಗಿದ್ದೇವೆ. ಕೃಷಿ ಇಲಾಖೆ ಬೀಜ, ಗೊಬ್ಬರ ಹಾಗೂ  ಔಷಧಿಗಳನ್ನು ಸಂಗ್ರಹಿಸಿ ಸರ್ವಸನ್ನದ್ದವಾಗಿದೆ ಎಂದರು. 

ಬಜೆಟ್ ನಂತರ ಪರಿಶೀಲನೆ: ಸಣ್ಣ ಕೈಗಾರಿಕೆಗಳು ಹಾಗೂ ಕಾಸಿಯಾ ಪ್ರತಿನಿಧಿಗಳೊಂದಿಗೆ ನಿನ್ನೆ ನಡೆದ ಚರ್ಚೆಯಲ್ಲಿ ಅವರು ತಮ್ಮ ಸಮಸ್ಯೆಗಳನ್ನು  ತಿಳಿಸಿದ್ದಾರೆ. ಬಜೆಟ್ ಮಂಡನೆಯ ನಂತರ ಈ ಬಗ್ಗೆ ಪರಿಶೀಲಿಸುವ ಭರವಸೆ  ನೀಡಲಾಗಿದೆ  ಎಂದರು.  

ಕೈಗಾರಿಕೆಗಳಿಗೆ ಒಂಭತ್ತು ತಿಂಗಳ ವಿದ್ಯುತ್ ತೆರಿಗೆ ವಿಧಿಸಲಾಗಿದೆ. ಇದರಿಂದ ತಮಗೆ ಹೊರೆಯಾಗಿದೆ  ಎಂದು ಕೈಗಾರಿಕೋದ್ಯಮಿಗಳು ತಿಳಿಸಿದ್ದಾರೆ.  ದರ ಪರಿಷ್ಕರಣೆ ನಮ್ಮ ಸರ್ಕಾರದ ಅವಧಿಯಲ್ಲಿ ಆಗಿದ್ದಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದು. ದರ ಪರಿಷ್ಕರಣೆಯನ್ನು ಪ್ರತಿ ವರ್ಷ ಕೆ.ಇ.ಆರ್.ಸಿ ಮಾಡುತ್ತದೆ. ದರ ಏರಿಕೆಗೂ ನಮ್ಮ ಸರ್ಕಾರಕ್ಕೂ ಸಂಬಂಧವಿಲ್ಲ. ನಾವೂ ಕೂಡ ಅವರಿಗೆ ಎಷ್ಟು ಮಾಡಬೇಕೆಂದು ಮನವಿ ಸಲ್ಲಿಸಿರುತ್ತೇವೆ. ಅದೊಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದರು.

ಹಾಲಿನ ದರ ಹೆಚ್ಚಳದ ಕುರಿತಂತೆ ಇರುವ ಪ್ರಸ್ತಾವನೆ ಬಗ್ಗೆ ಸಂಬಂಧಪಟ್ಟವರಿಗೆ  ಮಾತನಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬಡವರ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ತೊಂದರೆ: ಈಗಾಗಲೇ ತಿಳಿಸಿರುವಂತೆ ಬಡವರ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕೆಂದು ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಅವರ ಬಳಿ ಲಕ್ಷಗಟ್ಟಲೆ ಟನ್ ಅಕ್ಕಿಯಿದೆ.  

ಖಾಸಗಿಯವರಿಗೆ ಹರಾಜು ಮಾಡುತ್ತಾರೆ, ಆದರೆ ರಾಜ್ಯಗಳಿಗೆ ನೀಡುವುದಿಲ್ಲ ಎನ್ನುತ್ತಾರೆ. ಹಣ ನೀಡಿದರೂ ಕೊಡುವುದಿಲ್ಲ. 36.70 ರೂ. ಗಳ ವೆಚ್ಚದಲ್ಲಿ 1 ಕೆಜಿ ಅಕ್ಕಿ ಪಡೆಯಬಹುದು. ದ್ವೇಷದ ರಾಜಕಾರಣ ಮಾಡುವವರನ್ನು ಬಡವರ ವಿರೋಧಿ ಎನ್ನಬೇಕು ಎಂದರು.

ಧರಣಿ ಮಾಡಲು ನೈತಿಕ ಹಕ್ಕಿಲ್ಲ: ಬಿ.ಎಸ್.ಯಡಿಯೂರಪ್ಪ ಅವರು ಅಕ್ಕಿ ನೀಡದಿದ್ದರೆ ಧರಣಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಧರಣಿ ಮಾಡುವ ಸ್ವಾತಂತ್ರ್ಯವಿದೆ. ಆದರೆ ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.  

ಅಕ್ಕಿ ಖರೀದಿ ಕುರಿತು ಸರ್ಕಾರಿ ಏಜೆನ್ಸಿಗಳೊಂದಿಗೆ ಇಂದು ಮಾತುಕತೆ: ಐದು ಗ್ಯಾರಂಟಿ ಯೋಜನೆಗಳ ಪೈಕಿ  ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ ಒಂದರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ.

2.29 ಲಕ್ಷ  ಮೆಟ್ರಿಕ್ ಟನ್ ಎಲ್ಲಿಯೂ ದೊರೆಯುತ್ತಿಲ್ಲ. ಎಲ್ಲಾ ರಾಜ್ಯದವರೂ ಪೂರ್ಣಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್.ಸಿ.ಸಿ.ಎಫ್ ನಿಂದ  ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ  ದರಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ.

ಇಂದು 3.00 ಗಂಟೆಗೆ ಮಾತುಕತೆ ನಡೆಯಲಿದ್ದು ಎಷ್ಟು ಅಕ್ಕಿ, ದರ ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುವುದು. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಪಡೆಯಲು ಟೆಂಡರ್ ಕರೆಯಬೇಕು. ಜೋಳ, ರಾಗಿ ವಿತರಣೆ 6 ತಿಂಗಳಿಗಾಗುವಷ್ಟಿದೆ. 2 ಕೆಜಿಯಂತೆ ನೀಡಬಹುದು. ಇನ್ನೂ 3 ಕೆಜಿ ಅಕ್ಕಿ ನೀಡಬೇಕಿದೆ. ಇಡೀ ವರ್ಷ ನೀಡುವಷ್ಟು ರಾಗಿ, ಜೋಳವಿಲ್ಲ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ HD Kumaraswamy

[ccc_my_favorite_select_button post_id="105331"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!