ಆಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆ: ಸಿಎಂ ಸಚಿವಾಲಯದಲ್ಲಿ ಉದ್ಯೋಗ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜೂ 30) : ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ತ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. 

ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ತೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 

2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. 

ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು. 

ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾಮಿ ವೇಷದಲ್ಲಿ ಆರೋಪಿ, ಭಕ್ತರ ವೇಷದಲ್ಲಿ ಪೊಲೀಸರು: ಆಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ಥೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ. ( ಆಸಿಡ್ ದಾಳಿ ಸಂತ್ರಸ್ತೆಯ ಗುರುತನ್ನು ಬಹಿರಂಗಗೊಳಿಗೊಳಿಸಬಾರದು ಎನ್ನುವ ಕಾರಣಕ್ಕೆ ಅವರ ಹೆಸರು ಮತ್ತು ಚಿತ್ರವನ್ನು ಇಲ್ಲಿ ಹಂಚಿಕೊಂಡಿಲ್ಲ. ಬದಲಿಗೆ ಅಹಾವಲು ಸಲ್ಲಿಕೆಯ ಇತರೆ ಪೋಟೋ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬಮೂಲ್ ಚುನಾವಣೆ: ಜೆಡಿಎಸ್ ಆಕ್ಟೀವ್.. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆ

ಬಮೂಲ್ ಚುನಾವಣೆ: ಜೆಡಿಎಸ್ ಆಕ್ಟೀವ್.. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆ

ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ನಿರ್ದೇಶಕರ ಅಭ್ಯರ್ಥಿ ಆಯ್ಕೆಯ ಸಂಬಂಧಿಸಿದ ಪೂರ್ವಭಾವಿ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪಾಲ್ಗೊಂಡರು.

[ccc_my_favorite_select_button post_id="105797"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಮಗಳು ಧನುಶ್ರೀಗೆ ಈಜು ಕಲಿಸಲು ಹೋಗಿದ್ದ ತಂದೆ ಕೆರೆಯಲ್ಲಿ ಮುಳುಗಿ ಮಗಳೊಡನೆ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ swimming

[ccc_my_favorite_select_button post_id="105788"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!