ಅನ್ನಭಾಗ್ಯ ನೇರ ನಗದು ವರ್ಗಾವಣೆ ಯೋಜನೆಗೆ ಚಾಲನೆ: ಹಸಿದ ಹೊಟ್ಟೆಗೆ, ದುಡಿಯುವ ಕೈಗಳಿಗೆ ಶಕ್ತಿ-ಚೈತನ್ಯ ತುಂಬುವ ಸಲುವಾಗಿ ಅನ್ನಭಾಗ್ಯವೆಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು. (ಜು 10): ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ ನಮ್ಮಿಂದ ತಗೊತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. 

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನ ಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದರು. 

ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕನ್ನಡ ಜನತೆ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ ಎಂದು ಮಾಧ್ಯಮಗಳ ಮೂಲಕ ನಾಡಿನ ಜನತೆಯನ್ನು ಪ್ರಶ್ನಿಸಿದರು. 

4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170ರೂ ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು-ಮಧ್ತಮ ವರ್ಗದವರು ಎರಡು ಹೊತ್ತು ತಿಂದರೆ ಬಿಜೆಪಿಗೆ ಏನು ಹೊಟ್ಟೆಯುರಿ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ನಿಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಿರ್ವಹಿಸಿ ಎಂದು ಕರೆ ನೀಡಿದರು. 

ನೆಮ್ಮದಿಯ ಬದುಕಿಗೆ ಆಹಾರ ಭದ್ರತೆ ಅನ್ನಭಾಗ್ಯ ಎನ್ನುವ ಘೋಷವಾಕ್ಯದಲ್ಲಿ ಚಾರಿತ್ರಿಕವಾದ ಕಾರ್ಯಕ್ರಮಕ್ಕೆ ಸರ್ಕಾರ ರಚನೆಯಾಗಿ 50ನೇ ದಿನಕ್ಕೇ ಚಾಲನೆ ನೀಡಲಾಯಿತು. 

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅನ್ನಭಾಗ್ಯದ ಲೋಗೋ ಬಿಡುಗಡೆ ಮಾಡಿದರು. ಯೋಜನೆಯ ಮಾಹಿತಿ ಪತ್ರವನ್ನು ಆರೋಗ್ಯ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಬಿಡುಗಡೆ ಮಾಡಿದರು. 

ವೇದಿಕೆಯಲ್ಲಿ ರಾಮಲಿಂಗಾರೆಡ್ಡಿ, ಬಿ.ಎಸ್.ಸುರೇಶ್, ಹೆಚ್.ಕೆ.ಪಾಟೀಲ್ ಸೇರಿ ಹಲವು ಸಚಿವರು ಮತ್ತು ಶಾಸಕರುಗಳು ಉಪಸ್ಥಿತರಿದ್ದರು. 

ಕಾರ್ಯಕ್ರಮದ ಹೈಲೈಟ್ಸ್: 

ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಮೊದಲಿಗೆ ಹಣ ವರ್ಗಾವಣೆ ಆಯಿತು.

ನಾಳೆಯಿಂದ ಪ್ರತಿದಿನ ಹಂತ ಹಂತವಾಗಿ ರಾಜ್ಯದ ಸರ್ವ ಫಲಾನುಭವಿಗಳಿಗೂ ಹಣ ವರ್ಗಾವಣೆ ಆಗಲಿದೆ.

ಡಿಬಿಟಿ ಬಳಿಕ ಯೋಜನೆಯ ಪ್ರಚಾರ ವಿಡಿಯೊವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.

10 ವರ್ಷಗಳ ಹಿಂದೆ ಇದೇ ದಿನ ಮೊದಲ ಬಾರಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಿದ್ದರು.

ಬಸವ ಜಯಂತಿಯಂದು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರು, “ಬಸವಣ್ಣನವರ ದಾಸೋಹ ಸಂಸ್ಕೃತಿಯಂತೆ ಹಸಿವು ಮುಕ್ತ ಕರ್ನಾಟಕ ಮಾಡುವ ತಮ್ಮ ಜೀವಮಾನದ ಆಶಯ ಮತ್ತು ಕಾಳಜಿಯ ಭಾಗವಾಗಿ ಅನ್ನಭಾಗ್ಯ ಯೋಜನೆಯನ್ನು ಘೋಷಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ಸಿನವರಿಗೆ ಹಿಂದೂಗಳು ಕಾಣುತ್ತಿಲ್ಲ; ಇದು ದೇಶದ ದುರ್ದೈವ – ಬಿವೈ ವಿಜಯೇಂದ್ರ

ಕಾಂಗ್ರೆಸ್ಸಿನವರಿಗೆ ಹಿಂದೂಗಳು ಕಾಣುತ್ತಿಲ್ಲ; ಇದು ದೇಶದ ದುರ್ದೈವ – ಬಿವೈ ವಿಜಯೇಂದ್ರ

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="105724"]
ಉಗ್ರರ ದಾಳಿ: ನಾವು ಹೆದರುವುದಿಲ್ಲ, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ; ನಿಖಿಲ್ ಕುಮಾರಸ್ವಾಮಿ

ಉಗ್ರರ ದಾಳಿ: ನಾವು ಹೆದರುವುದಿಲ್ಲ, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ; ನಿಖಿಲ್ ಕುಮಾರಸ್ವಾಮಿ

ಪೈಶಾಚಿಕ ಭಯೋತ್ಪಾದಕ ದಾಳಿಯು ಕಣಿವೆ ರಾಜ್ಯದಲ್ಲಿ ಇನ್ನೂ ಅಡಗಿರುವ ಕ್ರೂರತ್ವದ ನೆರಳಿನ ಮತ್ತು ದ್ವೇಷದ ಹೇಯ ದುಃಸ್ವಪ್ನವಾಗಿದೆ: Nikhil Kumaraswamy

[ccc_my_favorite_select_button post_id="105717"]
ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಆದಿಚುಂಚನಗಿರಿ ಮಠದ ಪೀಠಾಧಿಕಾರಿ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), 'ಉಗ್ರರಿಗೆ ಜಾತಿ ಮತ್ತು ಧರ್ಮದ ಬಣ್ಣ ಹಚ್ಚದೇ ಉಗ್ರರನ್ನು ಮಟ್ಟ ಹಾಕಿ'.

[ccc_my_favorite_select_button post_id="105711"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!