ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ಚಂದ್ರಯಾನ-3 ನೌಕೆ; ಆಗಸ್ಟ್‌ನಲ್ಲಿ ಚಂದ್ರನ ಅಂಗಳಕ್ಕೆ: ಅಭಿನಂದನೆ ಸಲ್ಲಿಸಿದ ಪ್ರಧಾನಿ

ಬೆಂಗಳೂರು, (ಜುಲೈ.14): ಇಸ್ರೋದ ಮಹಾತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆ ಆಂಧ್ರದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ 2.35ಕ್ಕೆ ಸತೀಶ್ ಧವನ್ ಸ್ಪೇಸ್ ಸೆಂಟರ್ ನಿಂದ ಉಡಾವಣೆ ಮಾಡಲಾಗಿದೆ.

ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದು ಆಗಸ್ಟ್ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿದೆ.

ಚಂದ್ರಯಾನ -3 ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ’ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ.

ಪ್ರಸಿದ್ಧ ಭಾರತೀಯ ವಿಜ್ಞಾನಿ ವಿಕ್ರಮ್ ಸಾರಾಭಾಯ್ ಅವರಿಗೆ ಗೌರವಾರ್ಥವಾಗಿ, ಚಂದ್ರಯಾನ-3 ಮಿಷನ್‌ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಸಲಾಗಿದೆ.

ಚಂದ್ರಯಾನ-3 ಮಿಷನ್ ಜೊತೆಯಲ್ಲಿರುವ ರೋವರ್ ಅನ್ನು ಸೂಕ್ತವಾಗಿ “ಪ್ರಜ್ಞಾನ್” ಎಂದು ಹೆಸರಿಸಲಾಗಿದೆ. ಇದನ್ನು ಸಂಸ್ಕೃತ ಪದದಿಂದ ಪಡೆಯಲಾಗಿದ್ದು, “ಬುದ್ಧಿವಂತಿಕೆ” ಎಂಬ ಅರ್ಥವನ್ನು ನೀಡುತ್ತದೆ.

ಕಳೆದ ಬಾರಿ ಚಂದ್ರನ ಮೇಲ್ಮೈ ಮೇಲೆ ಇಳಿಯಲು ನೌಕೆ ವಿಫಲವಾಗಿತ್ತು. ಈ ಬಾರಿ ಸುರಕ್ಷಿತವಾಗಿ ಚಂದ್ರನ ಮೇಲ್ಮೈ ಮೇಲೆ ನೌಕೆಯನ್ನು ಇಳಿಸಲು ಇಸ್ರೋ ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಆಗಸ್ಟ್ 23 ಅಥವಾ 24ರಂದು ನೌಕೆ ಚಂದ್ರನ ಮೇಲ್ಮೈ ಮೇಲೆ ಇಳಿಯುವ ವಿಶ್ವಾಸವಿದೆ.

ಇದುವರೆಗೂ ಚಂದ್ರನ ಮೇಲೆ ನೌಕೆ ಇಳಿಸಲು ಮೂರು ರಾಷ್ಟ್ರಗಳು ಮಾತ್ರ ಸಫಲವಾಗಿವೆ. ಭಾರತದ ಚಂದ್ರಯಾನ-3 ಯಶಸ್ವಿಯಾದರೆ, ಚಂದ್ರನ ಅಂಗಳದ ನೌಕೆ ಇಳಿಸಿದ ನಾಲ್ಕನೇ ರಾಷ್ಟ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಅಮೆರಿಕ, ರಷ್ಯಾ, ಚೀನಾ ಮಾತ್ರ ಈವರೆಗೆ ಯಶಸ್ವಿಯಾಗಿ ನೌಕೆಯನ್ನು ಚಂದ್ರನ ಮೇಲೆ ಇಳಿಸಿವೆ.

ಚಂದ್ರನ ಮೇಲೆ ಲ್ಯಾಂಡರ್, ರೋವರ್ ಯಂತ್ರ ಇಳಿದು ಮಹತ್ವದ ಅಧ್ಯಯನ ನಡೆಸಲಿವೆ. ಭಾರತದ ಪಾಲಿಗೆ ಇದು ಮಹತ್ವಪೂರ್ಣ ಯೋಜನೆಯಾಗಿದೆ.

ಇನ್ನೂ ಯಶಸ್ವಿ ಉಡಾವಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿದ್ದು, ಚಂದ್ರಯಾನ-3 ಭಾರತದ ಬಾಹ್ಯಾಕಾಶ ಒಡಿಸ್ಸಿಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತದೆ.  ಇದು ಪ್ರತಿ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಎತ್ತರಕ್ಕೆ ಏರಿಸುತ್ತದೆ.  ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ.  ನಾನು ಅವರ ಚೈತನ್ಯ ಮತ್ತು ಜಾಣ್ಮೆಯನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]