ಬೆಂಗಳೂರು, (ಜುಲೈ.14): ಇಸ್ರೋದ ಮಹಾತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆ ಆಂಧ್ರದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ 2.35ಕ್ಕೆ ಸತೀಶ್ ಧವನ್ ಸ್ಪೇಸ್ ಸೆಂಟರ್ ನಿಂದ ಉಡಾವಣೆ ಮಾಡಲಾಗಿದೆ.
ಇಡೀ ದೇಶವೇ ಚಂದ್ರಯಾನ ಯಶಸ್ವಿ ಉಡಾವಣೆಯ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಕೆಲವು ಚಿಂತಕರು ವ್ಯಕ್ತಪಡಿಸಿರುವ ಅಭಿಪ್ರಾಯ ಭಾರಿ ಚರ್ಚೆಗೆ ಕಾರಣವಾಗಿದೆ.
ಅವರು ಚಂದ್ರಯಾನದ ಸಾಹಸವನ್ನು ಅಭಿನಂದಿಸಿದ್ದಾರೆ. ಆದರೆ, ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ ನಿಲುವನ್ನು ಆಕ್ಷೇಪಿಸಿದ್ದಾರೆ ಈ ರೀತಿ ಆಕ್ಷೇಪಿಸುವ ಖಂಡನಾ ಹೇಳಿಕೆಯಲ್ಲಿ ಎಡವಟ್ಟು ಮಾಡಿದ್ದಾರೆ. ಚಂದ್ರಯಾನ ಎಂದು ಹೇಳುವ ಬದಲು ಮಂಗಳಯಾನ ಎಂದಿದ್ದಾರೆ. ಈ ಎಡವಟ್ಟನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಮಾಡಲಾಗುತ್ತಿದೆ.
ಅಂತೆಯೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ.ಎಲ್.ಸಂತೋಷ್ ಅವರು ಕೂಡಾ ಎಡಪಂಥೀಯ ಚಿಂತಕರ ಈ ಎಡವಟ್ಟನ್ನು ಗೇಲಿ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಬಿ.ಎಲ್.ಸಂತೋಷ್, ಚಂದ್ರಯಾನ- ಮಂಗಳಯಾನದ ನಡುವಿನ ಅಂತರ ಗೊತ್ತಿಲ್ಲದ, ಎಲ್ಲದರ ಬಗ್ಗೆಯೂ ಅಭಿಪ್ರಾಯ ಹೊಂದಿರುವ, ಎಲ್ಲದರಲ್ಲೂ ಕಹಿ ಹರಡುವ ದೊಡ್ಡವರು ಎಂದು ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….