ದೊಡ್ಡಬಳ್ಳಾಪುರ: ಯುವಜನತೆಗೆ ಉತ್ತಮ ಉದ್ಯೋಗಾವಕಾಶಗಳು ಕಲ್ಪಿಸಲು ಉದ್ಯೋಗಮೇಳ ಸಹಕಾರಿ

ದೊಡ್ಡಬಳ್ಳಾಪುರ, (ಜುಲೈ.19): ಜಿಲ್ಲೆಯಲ್ಲಿ ಯುವಜನತೆಗೆ ಉತ್ತಮ ಉದ್ಯೋಗ ಆವಕಾಶ ಕಲ್ಪಿಸಲು ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ ವತಿಯಿಂದ  ಎಸ್.ಎ.ಪಿ ಲ್ಯಾಬ್-ಕೋಡ್ ಉನ್ನತಿ ಯೋಜನೆಯಡಿ ಉದ್ಯೋಗ ಮೇಳ ನಡೆಸುತ್ತಿರುವುದು ಶ್ಲಾಘನೀಯ ಎಂದು ದೊಡ್ಡಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ  ಅಭಿಪ್ರಾಯ ಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ ಮತ್ತು  ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ  ಮತ್ತು ಜೀವನೋಪಾಯ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮತ್ತು ಎಸ್.ಎ.ಪಿ ಲ್ಯಾಬ್-ಕೋಡ್ ಉನ್ನತಿ ಯೋಜನೆ ವತಿಯಿಂದ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಯುವಜನರಿಗೆ ಉದ್ಯೋಗ ಅವಕಾಶಗಳು ಕಲ್ಪಿಸುವುದರಿಂದ ದೇಶದ ಆರ್ಥಿಕತೆ ಮತ್ತು ಪ್ರಗತಿ ಏಕಕಾಲದಲ್ಲಿ ಸಾಧಿಸಬಹುದಾಗಿದೆ ಎಂದರು. ಯುವಜನರು ಅವಕಾಶ ವಂಚಿತರಾಗದೆ ಸದುಪಯೋಗ ಪಡೆಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮ ಆಯೋಜಕರಾದ ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ ಸಂಯೋಜಕ ನಿಶಾಂತ್ ಚವ್ಹಾಣ್ ಮಾತನಾಡಿ, ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಪಡಿಸಿ ಅವರ ಪ್ರತಿಭೆಗೆ ತಕ್ಕಂತೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಯೋಜನೆಯ ಧ್ಯೇಯ ಎಂದರು.

ಉದ್ಯೋಗ ಮೇಳದಲ್ಲಿ ಉತ್ತಮ ವೇತನ ನೀಡುವ ಕಂಪನಿಗಳು ಭಾಗವಹಿಸಿದ್ದು ಸಂತಸ ತಂದಿದೆ ಎಲ್ಲಾ ಕಂಪನಿಗಳಗೂ ತಕ್ಷಣ ಉದ್ಯೋಗಿಗಳು ಬೇಕಿದ್ದು ಅವರೇ ತರಬೇತಿ ನೀಡಿ ಕೆಲಸ ನೀಡುವ ಗುರಿ ಹೊಂದಿದ್ದಾರೆ. 

ಈಗಾಗಲೇ ಕಳೆದ ಮೂರು ವರ್ಷಗಳಿಂದ ಕೋಡ್ ಉನ್ನತಿ ಯೋಜನೆಯು ಜಿಲ್ಲೆಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು  ಯುವಜನರಿಗೆ ಉತ್ತಮ ಉದ್ಯೋಗಿಗಳಾಗಲು  ಅವಶ್ಯವಿರುವ  ಕೌಶಲ್ಯಗಳು ಮತ್ತು ವೃತ್ತಿ ಮಾರ್ಗದರ್ಶನ ನಿಡಲಾಗುತ್ತಿದ್ದು, ಈ ಯೋಜನೆಯಡಿ ತರಬೇತಿ ಪಡೆದ ವಿದ್ಯಾರ್ಥಿಗಳು ಉದ್ಯೋಗಮೇಳದಲ್ಲಿ ಪಾಲ್ಗೊಂಡು ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯುವುದರೊಂದಿಗೆ ಈ ಯೋಜನೆಯ ಆಶಯವು ಯಶಸ್ವಿಯಾಗುವುದೆಂದು ತಿಳಿಸಿದರು.

ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯ ಸಮುದಾಯ ಸಂಯೋಜಕ ಪ್ರವೀಣ್ ಕುಮಾರ್ ಮಾತನಾಡಿ, ಪ್ರತಿಯೊಬ್ಬರಿಗೂ ಉದ್ಯೋಗದ ಮತ್ತು ಭವಿಷ್ಯದ ಕನಸು ಇರುತ್ತದೆ. ಇದಕ್ಕೆ ಪೂರಕವೆಂಬಂತೆ ಉತ್ತಮ ರೀತಿಯಲ್ಲಿ ಉದ್ಯೋಗಕಾಂಕ್ಷಿಗಳು ತಯಾರಿ ನಡೆಸಿದರೆ ಅತ್ಯುತ್ತಮ ಹುದ್ದೆ ಅಲಂಕರಿಸಬಹುದಾಗಿದೆ ಎಂದರು. ಈ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ವಿವಿಧ ಕಾಲೇಜುಗಳಿಂದ ಸುಮಾರು 300 ಕ್ಕೂ ಹೆಚ್ಚು  ಅಂತಿಮ ವರ್ಷದ ವಿದ್ಯಾರ್ಥಿಗಳು ಮತ್ತು ಪದವೀಧರ ಉದ್ಯೋಗಕಾಂಕ್ಷಿಗಳು ಪಾಲ್ಗೊಂಡಿದ್ದರು. ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಉದ್ಯೋಗದಾತ ಕಂಪನಿಯ ಪ್ರತಿನಿಧಿಗಳು ತಮ್ಮ ಸಂಸ್ಥೆಯ ಬಗ್ಗೆ ಹಾಗೂ ಅವರಲ್ಲಿರುವ ಉದ್ಯೋಗಾವಕಾಶಗಳು, ವೇತನ ಮತ್ತು ಇತರೆ ಸೌಲಭ್ಯಗಳ ಬಗ್ಗೆ  ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಸಿದ್ದರಾಮರಾಜು, ಪ್ರಾಧ್ಯಪಕರಾದ ನಾಗರಾಜು, ಯು.ಎನ್.ಡಿ.ಪಿ ಸಿಬ್ಬಂದಿ ಆಮೀರ್ ಹಸನ್, ಸವೆಂತ್ ಸಂಸ್ಥೆಯ ತರಬೇತಿದಾರರಾದ ಸಂಜಯ್, ಮಹಂತ್ ಹಾಗೂ ವಿವಿಧ ಕಂಪನಿಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ ಬಿ ಪಾಟೀಲ

2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ

ಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ.MB Patila

[ccc_my_favorite_select_button post_id="105159"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!