ಕಾರ್ಗಿಲ್ ಯೋಧರ ಬದುಕು ಯುವಕರಿಗೆ ಸ್ಫೂರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜುಲೈ.26): ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಳೆಯಿಂದಾಗಿ ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ.  ಹಾವೇರಿಯಲ್ಲಿ 87% ಬಿತ್ತನೆಯಾಗಿದೆ ಎಂದರು. 

ಜುಲೈ 31ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ: ಸೋಮವಾರ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ  ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು. ಸಚಿವ ಕೃಷ್ಣ ಬೈರೇಗೌಡರು ನಿನ್ನೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ: ಎಲ್ಲೆಡೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಟ್ಯಾಂಕರ್ ನೀರಿನ ಸರಬರಾಜು ಮಾಡಲಾಗುತ್ತಿತ್ತು. ಆದರೆ ಈಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂದರು.

ಅಮಾಯಕ ಮೇಲಿನ ಕೇಸ್ ವಾಪಸ್: ಡಿ.ಜೆ.ಹಳ್ಳಿ ಹಾಗೂ ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಅಮಾಯಕರ ಮೇಲಿನ ಕೇಸ್  ಹಿಂಪಡೆಯುವ ಬಗ್ಗೆ  ಪ್ರತಿಕ್ರಿಯೆ ನೀಡಿ ಹಿಂದಿನ ಸರ್ಕಾರದ ಅವಧಿಯಲ್ಲಿ ಏಕೆ ಹಿಂಪಡೆಯಲಿಲ್ಲ ಎಂದರು.

ಶಾಸಕರ ಹೆಸರಿನಲ್ಲಿ ನಕಲಿ ಪತ್ರ: ಶಾಸಕರು ಸಚಿವರ ಮೇಲೆ ದೂರು ನೀಡಿ ಮುಖ್ಯ ಮಂತ್ರಿಗಳಿಗೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು  ಶಾಸಕ ಬಿ.ಆರ್.ಪಾಟೀಲ್ ಅವರೇ ನಕಲಿ ಪತ್ರ ಎಂದು ಹೇಳಿದ್ದಾರೆ. ಆದರೂ ಪತ್ರಿಕೆಗಳಲ್ಲಿ ಪ್ರಚಾರ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಬರೆದಿದ್ದಾರೆ. ಇಂಥ ಮಂತ್ರಿ ಎಂದು ಹೆಸರಿಸಿಲ್ಲ ಎಂದರು.

ಕಾರ್ಗಿಲ್ ಯೋಧರ ಬದುಕು ಯುವಕರಿಗೆ ಸ್ಫೂರ್ತಿ: ಕಾರ್ಗಿಲ್ ಯುದ್ಧದಲ್ಲಿ ಸುಮಾರು 524 ಯೋಧರು ದುರ್ಗಮ ಸ್ಥಳದಲ್ಲಿ ಹೋರಾಡಿ ದೇಶವನ್ನು ರಕ್ಷಣೆ  ಮಾಡುವ ಕೆಲಸ ಮಾಡಿದ್ದಾರೆ.  ತ್ಯಾಗ, ಬಲಿದಾನ ಮಾಡಿದ ಎಲ್ಲರ ಆತ್ಮಕ್ಕೆ  ಶಾಂತಿ ಕೋರಿ ಸ್ಮರಿಸುವುದು ನಮ್ಮ ಕರ್ತವ್ಯ. ಅವರ ಜೀವನ ಇಂದಿನ ಯುವಕರಿಗೆ ಸ್ಫೂರ್ತಿ ಹಾಗೂ ಮಾರ್ಗದರ್ಶನ ನೀಡುವಂಥದ್ದು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಧಾರವಾಡ: ರಾಜ್ಯ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ರಾಜ್ಯ ಬಿಜೆಪಿ (BJP) ಇದೀಗ ಸರಣಿ ಹೋರಾಟಕ್ಕೆ ಮುಂದಾಗಿದ್ದು, ಇದರ ಭಾಗವಾಗಿ ಇಂದಿನಿಂದ ಮೈಸೂರಿನಲ್ಲಿ ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

[ccc_my_favorite_select_button post_id="105043"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!