ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಆಗಸ್ಟ್.9): ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರೊಂದಿಗೆ ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜಕಾರಣಿಗಳು ಕಾನೂನು ಹಾಗೂ ನೀತಿಗಳನ್ನು ನಿರೂಪಿಸಿದರೆ, ಅವುಗಳನ್ನು ಜಾರಿಗೊಳಿಸುವುದು ಅಧಿಕಾರಿಗಳು. ಅಧಿಕಾರಿಗಳು, ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಾರೆ. ಅಧಿಕಾರಿಗಳು ಪ್ರಾಮಾಣಿಕವಾಗಿ, ಜನಪರವಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ.  ಸರ್ಕಾರದ ಅಧಿಕಾರಿ ಹಾಗೂ ನೌಕರರು ಬಡವರ ವಿರೋಧಿ, ಜನವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಬಾರದು. ಜಾತಿ ಧರ್ಮಗಳ ಕಲಹದಲ್ಲಿಯೂ ಇರಬಾರದು. ಧರ್ಮಕ್ಕೂ, ಆಡಳಿತಕ್ಕೂ ಸಂಬಂಧವಿಲ್ಲ ಎಂದರು.

ವಿದ್ಯಾವಂತರು ಜಾತ್ಯಾತೀತೆ, ವೈಚಾರಿಕತೆಯನ್ನು ಪಾಲಿಸಬೇಕು: ಅಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಅಥವಾ ಧರ್ಮ ಕಲಹಗಳಲ್ಲಿ ತೊಡಗಿಕೊಳ್ಳಬಾರದು. ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನ ದೇಶವನ್ನು ರಕ್ಷಿಸುತ್ತದೆ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಒಬ್ಬ ವ್ಯಕ್ತಿ ಒಬ್ಬ ಮತ ಎಂದಿದೆ ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಈ ಸಮಾನತೆ ಇಲ್ಲ. ಹೀಗೆ ಮುಂದುವರೆದರೆ , ಅಸಮಾನತೆಗೆ ಒಳಗಾದ ಜನರು ಸ್ವಾತಂತ್ರ್ಯಸೌಧವನ್ನು ಧ್ವಂಸಗೊಳಿಸುವ ಸಾಧ್ಯತೆ ಇದೆ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಇದು ಎಲ್ಲ ನಾಗರಿಕರ ಕರ್ತವ್ಯ. ಇದನ್ನು ಅರ್ಥಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಸುಧಾರಣೆ ತರಬಹುದಾಗಿದೆ. ಈಗ ಶಿಕ್ಷಣ ಅಭಿವೃದ್ಧಿಗೊಳ್ಳುತ್ತಿದೆ.  ವಿದ್ಯಾವಂತರು ಜಾತ್ಯಾತೀತೆ, ವೈಚಾರಿಕತೆಯನ್ನು ಪಾಲಿಸಬೇಕು ಎಂದರು.

ಸಾಮಾಜಿಕ ಸುಧಾರಣೆ: ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಈಗಾಗಲೇ 3 ಗ್ಯಾರಂಟಿ ಜಾರಿಯಾಗಿವೆ. ಆಗಸ್ಟ್ 24 ರಂದು 4 ನೇ ಗ್ಯಾರಂಟಿ ಹಾಗೂ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024 ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದೆ. ಸ್ವಾತಂತ್ರ್ಯ ಭಾರತದ ಫಲವನ್ನು ಜನರಿಗೆ ತಲುಪಿಸುವ ಮೂಲಕ ಸಾಮಾಜಿಕ ಸುಧಾರಣೆಯನ್ನು ತರಬಹುದಾಗಿದೆ ಎಂದರು.

ಸಮಾಜ ನಿರ್ಮಾಣದ ಜವಾಬ್ದಾರಿ: ಇದೇ ದಿನ ಮಹಾತ್ಮಾ ಗಾಂಧಿಯವರು ಬ್ರಿಟೀಷರಿಗೆ  ಅಂತಿಮ ಕರೆ ನೀಡಿದ ಕ್ವಿಟ್ ಇಂಡಿಯಾ ದಿನವನ್ನು ಇಂದು ಆಚರಣೆ ಮಾಡಲಾಗುತ್ತಿದೆ.  ಪ್ರತಿಯೊಬ್ಬರೂ ಸಮಾಜಕ್ಕೆ ತಮ್ಮನ್ನು  ತಾವು ಅರ್ಪಿಸಿಕೊಳ್ಳಬೇಕೆಂದು ಸಂಕಲ್ಪ ಮಾಡಬೇಕಾದ ದಿನ. ಅಧಿಕಾರಿಗಳಾಗಲಿ, ಜನರಾಗಲಿ, ಸಮಾಜ ನನಗೇನು ಮಾಡಿತು ಎನ್ನುವ ಬದಲು ಸಮಾಜಕ್ಕೆ ನನ್ನ ಕೊಡುಗೆ ಏನು ಎಂಬುದನ್ನು ಅರಿತುಕೊಳ್ಳಬೇಕು. ಸಮಾಜವನ್ನು ಬದಲಾವಣೆ , ಸುಧಾರಣೆ, ಸಮಾನತೆಯ ಸಮಾಜ ನಿರ್ಮಾಣದ ಜವಾಬ್ದಾರಿ ನಮ್ಮ ಮೇಲಿದೆ. ಇದೇ ತತ್ವವನ್ನು  ಬಸವ, ಬುದ್ಧ, ಗಾಂಧೀಜಿ, ಅಂಬೇಡ್ಕರ್ , ಕುವೆಂಪು, ನಾರಾಯಣಗುರು ಸೇರಿದಂತೆ ಹಲವು ದಾರ್ಶನಿಕರು ಬೋಧಿಸಿದ್ದಾರೆ ಎಂದರು.

ಅರ್ಥಪೂರ್ಣ ಶತಮಾನೋತ್ಸವ: 1919 ರಲ್ಲಿ  ಸಂಘ ಅಸ್ತಿತ್ವ ಬಂದಿದ್ದು ,  ಇದಕ್ಕೆ ಸ್ಪೂರ್ತಿ ಒಬ್ಬ ಐರ್ ಲೆಂಡ್ ಅಧಿಕಾರಿ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತಾವಧಿಯನ್ನು ಸುವರ್ಣ ಯುಗ  ಎನ್ನಲಾಗುತ್ತದೆ. ಅವರ ಕಾಲದಲ್ಲಿ ಆದಂತಹ ಅಭಿವೃದ್ಧಿ , ಸಾಮಾಜಿಕ ಕಾರ್ಯಗಳು, ಉದ್ದಿಮೆಗಳು ದೊಡ್ಡಮಟ್ಟದಲ್ಲಿ ಆಗಿತ್ತು.  ಇದೇ ಅವಧಿಯಲ್ಲಿ ನಾಗರಿಕ ಸೇವೆ ಎಂಬ ಕಲ್ಪನೆಗೆ ಜೀವ ಬಂದಿತು. 1973 ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕಾರಣವಾಯಿತು. ಮೊದಲು ಮೈಸೂರು ಆಡಳಿತ ಸೇವೆ ಎಂದಿದ್ದು, ನಂತರ ಕರ್ನಾಟಕ ಆಡಳಿತ ಸೇವೆ ಎಂದು ಹೆಸರಿಸಲಾಯಿತು.  ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ತನ್ನ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದೆ ಎಂದರು.

ಸಮಾರಂಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಇ.ವಿ. ರಮಣರೆಡ್ಡಿ, ಕೆ.ಎ.ಎಸ್. ಅಧಿಕಾರಿಗಳ ಸಂಘದ ಅಧ್ಯಕ್ಷ ರವಿ ತಿರ್ಲಾಪೂರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರ ಸಚಿವ H.D.Kumaraswamy

[ccc_my_favorite_select_button post_id="105039"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!