ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪತ್ರ

ಬೆಂಗಳೂರು, (ಆ.14): ತಮಿಳುನಾಡು ಸರ್ಕಾರ  ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ಸಂದರ್ಭದಲ್ಲಿ  ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ನಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಪತ್ರ ಬರೆದಿದ್ದಾರೆ.

ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ ಹಾಗೂ ತಮಿಳುನಾಡು ಸುಪ್ರಿಂ ಕೋರ್ಟ್ ಗೆ ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ಕೆಳಕಂಡ ಮಹತ್ವದ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ನಾನು ಈ ಪತ್ರ ಬರೆಯುತ್ತಿದ್ದೇನೆ‌.

ಜೂನ್ 1 ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲದಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ 6-8-2023 ಕ್ಕೆ 14.054 ಟಿಎಂಸಿ ನೀರು ಹೋಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಒಟ್ಟು ತಮಿಳುನಾಡಿದ ಮೆಟ್ಟೂರು ಡ್ಯಾಮನಲ್ಲಿ ಈ ವರ್ಷ 83.831ಟಿಎಂಸಿ ನೀರು ಬಂದಿರುತ್ತದೆ.

ತಮಿಳುನಾಡು ಕುರುವೈ ಬೆಳೆಗೆ 1 ಲಕ್ಷ ಎಂಬತ್ತು ಸಾವಿರ ಎಕರೆ ಬೆಳೆ ಸಿಡಬ್ಲುಡಿಟಿ ಪಕ್ರಾರ ಬೆಲೆಯಬೇಕು ಹಾಗೂ  32 ಟಿಎಂಸಿ ನೀರು ಬಳಸಬೇಕು. ಆದರೆ, ತಮಿಳುನಾಡು 7-8-23 ಕ್ಕೆ 60.97 ಟಿಎಂಸಿ ನೀರು ಕುರುವೈ ಬೆಳೆಗೆ ಬಳಕೆ ಮಾಡಿದ್ದು ಸಿಡಬ್ಲುಡಿಟಿ ಆದೇಶದ ಎರಡು ಪಟ್ಡು ಹೆಚ್ಚಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ‌ಲೆಕ್ಕಿಸದೇ ಸಿಡಬ್ಲುಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಡು ಕುರುವೈ ಏರಿಯಾ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ.

ಈಗಿರುವ ನಮ್ಮ ನಾಲ್ಕು ಡ್ಯಾಮ್ ಗಳ ನಿರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ತದೆ.

ಅದೇ ರೀತಿ ಕಾವೇರಿ ‌ಜಲಾನಯನ ಪ್ರದೇಶದ ಕರೀಫ್ ಬೆಳೆಗಳಿಗೆ ನಿರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ.

ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್  ಈಸ್ಟ್ ಮಾನಸೂನ್ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ.  ಹಾಗು ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ‌

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ಸಿನವರಿಗೆ ಹಿಂದೂಗಳು ಕಾಣುತ್ತಿಲ್ಲ; ಇದು ದೇಶದ ದುರ್ದೈವ – ಬಿವೈ ವಿಜಯೇಂದ್ರ

ಕಾಂಗ್ರೆಸ್ಸಿನವರಿಗೆ ಹಿಂದೂಗಳು ಕಾಣುತ್ತಿಲ್ಲ; ಇದು ದೇಶದ ದುರ್ದೈವ – ಬಿವೈ ವಿಜಯೇಂದ್ರ

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="105724"]
ಉಗ್ರರ ದಾಳಿ: ನಾವು ಹೆದರುವುದಿಲ್ಲ, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ; ನಿಖಿಲ್ ಕುಮಾರಸ್ವಾಮಿ

ಉಗ್ರರ ದಾಳಿ: ನಾವು ಹೆದರುವುದಿಲ್ಲ, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ; ನಿಖಿಲ್ ಕುಮಾರಸ್ವಾಮಿ

ಪೈಶಾಚಿಕ ಭಯೋತ್ಪಾದಕ ದಾಳಿಯು ಕಣಿವೆ ರಾಜ್ಯದಲ್ಲಿ ಇನ್ನೂ ಅಡಗಿರುವ ಕ್ರೂರತ್ವದ ನೆರಳಿನ ಮತ್ತು ದ್ವೇಷದ ಹೇಯ ದುಃಸ್ವಪ್ನವಾಗಿದೆ: Nikhil Kumaraswamy

[ccc_my_favorite_select_button post_id="105717"]
ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಆದಿಚುಂಚನಗಿರಿ ಮಠದ ಪೀಠಾಧಿಕಾರಿ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), 'ಉಗ್ರರಿಗೆ ಜಾತಿ ಮತ್ತು ಧರ್ಮದ ಬಣ್ಣ ಹಚ್ಚದೇ ಉಗ್ರರನ್ನು ಮಟ್ಟ ಹಾಕಿ'.

[ccc_my_favorite_select_button post_id="105711"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!