ವಿದೇಶಿ ಪ್ರವಾಸದಿಂದ ಮರಳಿದ ಹೆಚ್.ಡಿ.ಕೆ; ವಿದೇಶದಲ್ಲೇ ಇರಲಿ ಎಂದು ಕೆಣಕಿದ್ದ ಕೃಷಿ ಸಚಿವರಿಗೆ ತಿರುಗೇಟು

ಬೆಂಗಳೂರು, (ಆ.14): ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತಿರುಗೇಟು ನೀಡಿದ್ದಾರೆ.

ಭಾನುವಾರ ತಡರಾತ್ರಿ ವಿದೇಶಿ ಪ್ರವಾಸದಿಂದ ಬೆಂಗಳೂರು ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಮ್ಮನ್ನು ಎದುರುಗೊಂಡ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.

ಸಚಿವರ ಹೇಳಿಕೆಯ ಬಗ್ಗೆ ಕೆಂಡಾಮಂಡಲರಾದ ಮಾಜಿ ಸಿಎಂ, ‘ಇಲ್ಲಿ ಲೂಟಿ ಹೊಡೆಯೋಕೆ ನಮ್ಮನ್ನ ಬಿಟ್ಬಿಡಿ, ನೀವು ವಿದೇಶದಲ್ಲಿ ಇರಿ ಅಂತ ಸಲಹೆ ಕೊಟ್ಟ ಹಾಗಿದೆ. ಏಕೆಂದರೆ, ಮಾನ ಮಾರ್ಯಾದೆ ಇಲ್ಲದೆ ಇಲ್ಲಿ ದರೋಡೆ ಮಾಡಿಕೊಂಡು ಕೂತಿದ್ದಾರೆ. ನಾನು ಇಲ್ಲಿದ್ದರೆ ಅವರಿಗೆ ಆಗ್ತೀನಿ ಅಲ್ಲವೇ? ಎಂದರು.

ವಿದೇಶಿ ಪ್ರವಾಸಕ್ಕೆ ಅವರಿಂದ ವ್ಯವಸ್ಥೆ ಮಾಡಿಸಿಕೊಂಡು ಹೋಗಬೇಕಾ ನಾನು? ಆ ಪಾಪದ ಹಣ ತಗೊಂಡು ಹೋಗಬೇಕಾ? ವಿದೇಶಕ್ಕೆ ಹೋಗುವ ಯೋಗ್ಯತೆಯೂ ನನಗಿಲ್ಲವೇ? ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಮೀಸಲಿಟ್ಟಿದ್ದೆ. ಎಲ್ಲೂ ಹೊರಗೆ ಹೋಗಿ ಬರುವ ಅವಕಾಶ ಸಿಕ್ಕಿರಲಿಲ್ಲ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಮಾತಿದೆ. 

ಯಾವ ದೇಶದಲ್ಲಿ ಏನೇನಿದೆ ಅಂತಾ ತಿಳ್ಕೊಬೇಕಲ್ಲಾ? ಅಲ್ಲಿ ಯಾವ ರೀತಿ ಇದೆ, ನಮ್ಮಲ್ಲಿ ಯಾವ ರೀತಿ ಇದೆ ನೋಡಬೇಕಲ್ಲಾ. ಕಾಂಬೋಡಿಯಾಗೆ ಸ್ನೇಹಿತರ ಆಹ್ವಾನ ಇತ್ತು, ಹೋಗಿದ್ದೆ. ಅಲ್ಲಿನ ಸುವಿಶಾಲ ಪ್ರದೇಶದಲ್ಲಿ ಕಟ್ಟಿರುವ ಆಂಕರ್ ವಾಟ್ ಎಂಬ ಅದ್ಭುತವಾದ ದೇವಸ್ಥಾನ ಇದೆ. ನಮ್ಮ ದೇಶದಲ್ಲೂ ಇಲ್ಲ ಅಂತ ದೇವಸ್ಥಾನ. ಬ್ರಹ್ಮ, ವಿಷ್ಣು, ಮಹೇಶ್ವರ ತ್ರಿಮೂರ್ತಿಗಳು ಇರುವ ದೇವಸ್ಥಾನ. ಅದನ್ನು ಕಂಡು ನಾನು ವಿಸ್ಮಿನಾದೆ ಎಂದರು.

ಇತ್ತೀಚಿಗೆ ಆ ದೇಶ ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿದೆ. ಒಂದು ಕಾಲದಲ್ಲಿ ಭಾರೀ ಸಂಕಷ್ಟದಲ್ಲಿ ಇದ್ದ ಆ ದೇಶ ಈಗ ತುಂಬ ಅದ್ಭುತವಾಗಿ ಬೆಳೆಯುತ್ತಿದೆ. ಕಾಂಬೋಡಿಯಾದ ಜಿಡಿಪಿ ಶೇ.7.7 ರಷ್ಟಿದೆ ಎಂದು ಅಲ್ಲಿನ ಮಂತ್ರಿಗಳೊಬ್ಬರು ಹೇಳಿದರು. ಸಾರ್ವಜನಿಕರ ಹಣದ ವಿನಿಯೋಗದ ಬಗ್ಗೆ ಅಲ್ಲಿ ಕಠಿಣ ನಿಯಮಗಳಿವೆ. ನಮ್ಮಲ್ಲಿ ಹಣಕ್ಕೆ ಕೊರತೆ ಇಲ್ಲ, ಈಗ ಲೂಟಿ ಮಾಡ್ತಾ ಇದ್ದಾರೆ ಇವರು ಎಂದು ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.

ಈಗ ಮಧ್ಯಪ್ರದೇಶದಲ್ಲಿಯೂ 40% ಸರ್ಕಾರ ಅಂತಾ ಹೇಳಿ ಪೋಸ್ಟರ್ ಹಾಕ್ಕೊಂಡಿದ್ದಾರೆ. ಈ ದೇಶವನ್ನು ಇವರು ಎಲ್ಲಿಗೆ ತಗೊಂಡು ಹೋಗ್ತಿದ್ದಾರೆ? ಎಂದು ಅವರು ಕಿಡಿಕಾರಿದರು.

ರಾಜ್ಯಪಾಲರ ಬಳಿ ಏಕೆ ಹೋದರು?: ಕೃಷಿ ಅಧಿಕಾರಿಗಳು ರಾಜ್ಯಪಾಲರ ಬಗ್ಗೆ ಬರೆದಿರುವ ಪತ್ರದ ಪ್ರತಿಕ್ರಿಯೆ ನೀಡಿದ ಅವರು; ತಮ್ಮ ವಿರುದ್ಧ ಬರೆದಿರುವ ಪತ್ರ ನಕಲಿ ಎನ್ನುವುದಾದರೆ ಕೃಷಿ ಸಚಿವರು ರಾಜ್ಯಪಾಲರ ಬಳಿಗೆ ಏಕೆ ಹೋದರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ನಾನು ಆ ಪ್ರಕರಣದ ಬಗ್ಗೆ ಚರ್ಚೆಯನ್ನೆ ಮಾಡಿಲ್ಲ. ಎಲ್ಲೂ ಆ ಬಗ್ಗೆ ಮಾತನಾಡಿಲ್ಲ. ನನ್ನ ಹೆಸರು ಯಾಕೆ  ತಳುಕು ಹಾಕುತ್ತಿದ್ದಾರೆ ಅಲ್ಲಿ? ಅವರಿಗೆ ಅಲ್ಲೂ ನನ್ನ ಹೆಸರೇ ಬೇಕು, ಯಾಕೆಂದರೆ ನನ್ನದೇ ಭಯ ಇರೋದು ಅವರಿಗೆ ಎಂದು ಕುಟುಕಿದರು.

ಮೊದಲು ಪ್ರಾಮಾಣಿಕವಾಗಿ ನಡೆದುಕೊಳ್ಳುವುದನ್ನು ಕಲಿಯಬೇಕು. ಪ್ರಾಮಾಣಿಕವಾಗಿ ನಡೆದುಕೊಂಡರೆ  ಇಂತಹ ಪರಿಸ್ಥಿತಿ ಏನಕ್ಕೆ ಬರುತ್ತದೆ? ಮಂತ್ರಿಗಿರಿ ಸಿಕ್ಕಿದೆ ಅಂತಾ ಹಗಲು ದರೋಡೆ ಮಾಡೋದಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಅವರು ಹೇಳಿದರು.

ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕ ಮಂಜುನಾಥ್ ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="105430"]
ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ Cmsiddaramaiah

[ccc_my_favorite_select_button post_id="105401"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಯುವತಿಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಚಿತ್ರದುರ್ಗದಲ್ಲಿ.harithalekhani

[ccc_my_favorite_select_button post_id="105392"]
ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬೆಂಗಳೂರು ನಿಂದ ಹಿಂದೂಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಕೆಲ ಪ್ರಯಾಣಿಕರಿಗೆ ಕೈ ಕಾಲು ಮುರಿತ ಸಣ್ಣ ಪುಟ್ಟ. Harithalekhani accident

[ccc_my_favorite_select_button post_id="105419"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!