ದೊಡ್ಡಬಳ್ಳಾಪುರ, (ಆ.14): ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಮಾರ್ಗಕ್ಕೆ ಹೆಚ್ಚುವರಿ ಬಸ್ ಕಲ್ಪಿಸುವಂತೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪಾಲ್ ಪಾಲ್ ದಿನ್ನೆ ಬಳಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಈ ಹಿಂದೆ ಘಾಟಿ ಕ್ಷೇತ್ರದ ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ಸಕಾಲದಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ಆಗುತ್ತಿಲ್ಲ. ಈ ಬಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಘಾಟಿ ಕ್ಷೇತ್ರದ ಮಾರ್ಗದಲ್ಲಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ 14ದಿನಗಳು ಕಳೆದರೂ ಕೂಡ ಇದರ ಬಗ್ಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳದ ಕಾರಣ ಇಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಮುಖಂಡರು ದೂರಿದರು.
ಇನ್ನೆರಡು ದಿನದಲ್ಲಿ ಬಸ್ ವ್ಯವಸ್ಥೆ ಮಾಡಿಕೊಡುವುದಾಗಿ ಡಿಪೋ ವ್ಯವಸ್ಥಾಪಕರು ಭರವಸೆ ನೀಡಿದ್ದಾರೆ. ಒಂದು ವೇಳೆ ವ್ಯವಸ್ಥೆ ಮಾಡಿಕೊಡಲಿಲ್ಲ ಅಂದರೆ ಎಬಿವಿಪಿ ವತಿಯಿಂದ ದೊಡ್ಡಬಳ್ಳಾಪುರದ ಬಸ್ ಘಟಕದಲ್ಲಿ ಉಗ್ರವಾದ ಹೋರಾಟವನ್ನು ಮಾಡಲಾಗುವುದು ಎಂದರು.
ವೇಳೆ ಎಬಿವಿಪಿ ಹಿರಿಯ ಕಾರ್ಯಕರ್ತ ಸುಬ್ರಮಣಿ, ನಗರ ಕಾರ್ಯದರ್ಶಿ ದರ್ಶನ್ ಕಾರ್ಯಕರ್ತರಾದ ಎಸ್.ಕುಮಾರ್ , ರೋಹನ್, ಮಾರುತಿ ಯಾದವ್ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….