ರಾಜೀವ್ ಗಾಂಧಿ ದೇಶದ ಸಮಗ್ರತೆಗಾಗಿ ತಾಯಿಯಂತೆಯೇ ಹುತಾತ್ಮರಾದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಆ.20): ಭಾರತೀಯರನ್ನು 21 ನೇ ಶತಮಾನದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ವಿಧಾನಸೌಧದ ಕನಸು ಕಾಣಲೂ ಅಶಕ್ತರಾಗಿದ್ದ ಜಾತಿಗಳು ಗೆದ್ದು ವಿಧಾನಸಭೆ ಪ್ರವೇಶಿಸುವಂತೆ ಮಾಡಿದ ದೇವರಾಜು ಅರಸರು ಪ್ರಜಾತಂತ್ರದ ರೂವಾರಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 

ದೂರದೃಷ್ಟಿಯ ನಾಯಕ ರಾಜೀವ್ ಗಾಂಧಿ ಮತದಾನದ ವಯಸ್ಸನ್ನು 18 ವರ್ಷಕ್ಕೆ ಇಳಿಸಿದರು. ಆ ಮೂಲಕ ಯುವ ಸಮೂಹ ದೇಶದ ಭವಿಷ್ಯ ರೂಪಿಸುವಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಮಹಾನ್ ಜವಾಬ್ದಾರಿಯಲ್ಲಿ ಪಾಲ್ಗೊಳ್ಳುವಂತೆ ಮಾಡಿದರು. 

ದೇಶದ ಎಲ್ಲಾ ರಂಗಗಳಲ್ಲೂ ಯುವ ಸಮೂಹ ಮತ್ತು ಎಲ್ಲಾ ಜಾತಿ, ಜನ ವರ್ಗಗಳ ಪ್ರತಿನಿಧಿಗಳು ಪಾಲ್ಗೊಳ್ಳುವಿಕೆಯ ಮಹಾದ್ವಾರವನ್ನು ತೆರೆದವರು ರಾಜೀವ್ ಗಾಂಧಿ. ಇದಕ್ಕಾಗಿ ಅಧಿಕಾರ ವಿಕೇಂದ್ರೀಕರಣ ಜಾರಿ ಮಾಡಿದರು. ಸಂವಿಧಾನಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ತಂದರು. ಮಹಿಳೆಯರ ರಾಜಕೀಯ ಪ್ರಾತಿನಿಧ್ಯದ ಅವಕಾಶವನ್ನು ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ವಿಸ್ತರಿಸಿದವರು ರಾಜೀವ್ ಗಾಂಧಿ. ಇಂದು ರಾಜಕೀಯ ಕ್ಷೇತ್ರದಲ್ಲಿ ಇರುವ ಮಹಿಳೆಯರೆಲ್ಲರೂ ರಾಜೀವ್ ಗಾಂಧಿ ಅವರನ್ನು ಸ್ಮರಿಸಬೇಕು. ಶೇ50 ಮಹಿಳಾ ಮೀಸಲಾತಿ ಸಾಧ್ಯ ಆಗಿದ್ದು ರಾಜೀವ್ ಗಾಂಧಿ ಅವರಿಂದ ಎನ್ನುವುದನ್ನು ದೇಶದ ಪ್ರತಿಯೊಬ್ಬ ಮಹಿಳೆಯರೂ ಅರ್ಥ ಮಾಡಿಕೊಳ್ಳಬೇಕು ಎಂದರು. 

ಮಾಹಿತಿ ತಂತ್ರಜ್ಞಾನ ಮತ್ತು ಇಂಟರ್ ನೆಟ್ ವ್ಯವಸ್ಥೆಯಲ್ಲಿ ಭಾರತದಲ್ಲಿ ಕ್ರಾಂತಿ ಮಾಡಿದವರು ರಾಜೀವ್ ಗಾಂಧಿ. ಅವರು ಭವ್ಯ ಭಾರತ ನಿರ್ಮಾಣದ ಮತ್ತು ಸಾಮಾಜಿಕ ನ್ಯಾಯದ ಸಮಾಜವನ್ನು ರೂಪಿಸುವ ಮಹಾನ್ ಕನಸು ಮತ್ತು ಕಾರ್ಯಕ್ರಮಗಳನ್ನು  ಇಟ್ಟುಕೊಂಡಿದ್ದರು. ಅವೆಲ್ಲಾ ಜಾರಿ ಮಾಡುತ್ತಿದ್ದ ಹೊತ್ತಲ್ಲೇ ಹುತಾತ್ಮರಾಗಿ ಈ ನೆಲದ ಮಣ್ಣಿನಲ್ಲಿ ತ್ಯಾಗಮಯಿಯಾಗಿ ದಾಖಲಾದರು ಎಂದು ವಿವರಿಸಿದರು. 

ದೇಶಕ್ಕಾಗಿ, ದೇಶದ ಸಮಗ್ರತೆಗಾಗಿ ಹೋರಾಟ ಮಾಡಿದ,  ತ್ಯಾಗ ಮಾಡಿದ, ಹುತಾತ್ಮರಾದ ಇತಿಹಾಸ, ಚರಿತ್ರೆ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಈ ಯಾವ ಚರಿತ್ರೆ ಮತ್ತು ಇತಿಹಾಸ ಬಿಜೆಪಿಗೂ ಇಲ್ಲ. ಸಂಘ ಪರಿವಾರಕ್ಕೂ ಇಲ್ಲ. ಕೇವಲ ಭರ್ಜರಿ ಭಾಷಣ ಮಾಡುವುದರಲ್ಲಿ ಮಾತ್ರ ಬಿಜೆಪಿ ಪರಿವಾರದವರು ನಿಸ್ಸೀಮರು. ದೇಶ ನಿರ್ಮಾಣ ಕ್ರಿಯೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪಾತ್ರ ಏನೇನೂ ಇಲ್ಲ. ಕೇವಲ ಭಾಷಣಗಳಿಂದ ದೇಶ ನಿರ್ಮಾಣ ಸಾಧ್ಯವಿಲ್ಲ ಎಂದರು. 

ದೇವರಾಜ ಅರಸು ಅವರಿಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಛಲ ಇತ್ತು. ಹೀಗಾಗಿ ಮಲ ಹೊರುವ ಪದ್ಧತಿ ನಿಲ್ಲಿಸಿದರು. ಜೀತ ವ್ಯವಸ್ಥೆಗೆ ಮುಕ್ತಿ ಹಾಡಿದರು. ಹಿಂದುಳಿದ ಸಮುದಾಯಗಳ ಮೀಸಲಾತಿಗಾಗಿ ಹಾವನೂರು ಆಯೋಗ ರಚಿಸಿದರು. ಉಳುವವನೇ ಭೂ ಒಡೆಯ ಕಾನೂನು ಜಾರಿ ಮಾಡಿದರು. 

ಯಾರು ವಿಧಾನಸೌಧದ ಕನಸು ಕಾಣಲೂ ಸಾಧ್ಯ ಇರಲಿಲ್ಲವೂ ಅಂತಹ ಜಾತಿಗಳ ಪ್ರತಿನಿಧಿಗಳು ವಿಧಾನಸೌಧಕ್ಕೆ ಆರಿಸಿ ಬಂದು ಮಂತ್ರಿಗಳಾಗುವ ಹಾಗೆ ಕ್ರಾಂತಿ ಮಾಡಿದವರು ಅರಸು. 

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಮಧು ಬಂಗಾರಪ್ಪ, ಬೋಸ್ ರಾಜ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು ಇಷ್ಟೇ..!

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು

ಆ ಜಾತಿ ಹೆಚ್ಚು, ಈ ಜಾತಿ ಕಡಿಮೆ.. ಇಷ್ಟೇನಾ ಇವರ ಜಾತಿ..? ಮುಸ್ಲಿಂ ಸಮಯ ಹೆಚ್ಚು, ಜಾತಿಗಳನ್ನು ಒಡೆಯಲಾಗಿದೆ ಎಂಬಂತೆ ಕಳೆದೊಂದು ವಾರದಿಂದ ಭಜನೆ Harithalekhani

[ccc_my_favorite_select_button post_id="105456"]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ l ಶೇ 104.19%, ಹೊಸಕೋಟೆ 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% Mgnarega Harithalekhani

[ccc_my_favorite_select_button post_id="105446"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ‌..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ‌..

ಮೃತನ ವಾರಸುದಾರರು ಇದ್ದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ಪೋಲಿಸ್ ಮೊಬೈಲ್ ಸಂಖ್ಯೆ 9480802143, 9902193960, ರೈಲ್ವೆ PSI 9480802118 ಸಂಪರ್ಕಿಸಲು . Suicide

[ccc_my_favorite_select_button post_id="105467"]
ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬೆಂಗಳೂರು ನಿಂದ ಹಿಂದೂಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಕೆಲ ಪ್ರಯಾಣಿಕರಿಗೆ ಕೈ ಕಾಲು ಮುರಿತ ಸಣ್ಣ ಪುಟ್ಟ. Harithalekhani accident

[ccc_my_favorite_select_button post_id="105419"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!