ಅಧ್ಯಯನ ಮತ್ತು ಸಂಶೋಧನೆಗಳು ಗ್ರಂಥಾಲಯಗಳಲ್ಲಿ ಕೊಳೆಯಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಆ 21): ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್‌ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 

ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ. ಕುಲಪತಿಗಳು ನಮ್ಮ ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ.

ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿದ್ದಾಗ ಮಾತ್ರ ದೇಶದಲ್ಲಿ ಸಮಾನತೆ ಸಾಧ್ಯ ಎಂದು ಅಂಬೇಡ್ಕರ್‌ ಅವರು ಹೇಳಿದ್ದಾರೆ. ಈ ಸಮ ಸಮಾಜ ನಿರ್ಮಾಣ ಮಾಡುವ ಸಾಮರ್ಥ್ಯವನ್ನು ನಾವು ವಿವಿಗಳ ಮೂಲಕ ಕೊಡಬೇಕು ಎಂದರು. 

ಸಂವಿಧಾನಕ್ಕೆ ವಿರುದ್ಧವಾದ ಚಟುವಟಿಕೆ ಮತ್ತು ಕ್ರಮಗಳು ವಿವಿಗಳಲ್ಲಿ ನಡೆಯಬಾರದು. ವಿವಿಗಳಿಂದ ಬಂದವರು ಮತ್ತೆ ಮೌಢ್ಯಗಳು, ಜಾತಿಯ ಜೊತೆಯಲ್ಲಿದ್ದರೆ ಅವರು ಪಡೆದಿರುವುದು ಶಿಕ್ಷಣ ಎಂದು ಕರೆಯಲಾಗದು. ವಿವಿಗಳಲ್ಲಿ ಧರ್ಮ ನಿರಪೇಕ್ಷತೆ, ಮೌಢ್ಯ ರಹಿತ, ಕಂದಾಚಾರ ರಹಿತ ಹಾಗೂ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು.  ಕೆಲವೊಮ್ಮೆ ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಕರ್ತೃಗಳು, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ನಡೆಸಿರುವುದನ್ನು ಕೆಲವು ವಿವಿಗಳಲ್ಲಿ ನೋಡಿದ್ದೇನೆ. ಜಾತ್ಯತೀತ ವಿರೋಧಿ ಮನೋಭಾವವನ್ನು ಪುರಸ್ಕರಿಸಬಾರದು. ಹಾಗೆ ಮಾಡುವುದರಿಂದ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತದೆ. ಯಾವುದೇ ಕಾರಣಕ್ಕೆ ಅಂತಹ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಇಲ್ಲವಾದರೆ ಉನ್ನತ ಶಿಕ್ಷಣ ಸರಿದಾರಿಯಲ್ಲಿ ಸಾಗದೆ ಹೋದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸುವ ವಾತಾವರಣ ನಿರ್ಮಿಸಬೇಕು ಎಂದರು. 

ಅತಿಥಿ ಉಪನ್ಯಾಸಕರ ನೇಮಕದ ಸಂದರ್ಭದಲ್ಲಿ ಇಂತಹ ವ್ಯಕ್ತಿಗಳನ್ನು ನೇಮಕ ಮಾಡಕೂಡದು. ವಿವಿಯ ವಿದ್ಯಾರ್ಥಿಗಳು ಮನುಷ್ಯತ್ವ ಇರುವ ವ್ಯಕ್ತಿಗಳಾಗಿ ಬೆಳೆಯಬೇಕು. ಹುಟ್ಟುವಾಗ ಎಲ್ಲರೂ ವಿಶ್ವಮಾನವರು, ಬೆಳೆಯುತ್ತಾ ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದಂತೆ ಆಗಬಾರದು ಎಂದರು. 

ಸಾಕಷ್ಟು ಕೊರತೆಗಳನ್ನು ಇಟ್ಟುಕೊಂಡು ಜಿಲ್ಲೆಗೊಂದು ವಿವಿ ಮಾಡುವ ತೀರ್ಮಾನ ಸರಿಯಲ್ಲ.  ಮೂಲಸೌಲಭ್ಯ ಒದಗಿಸಲಾಗದಿದ್ದರೆ ಪ್ರಯೋಜನವಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಶೇ. 3 ಕ್ಕಿಂತ ಹೆಚ್ಚು ಅನುದಾನ ಒದಗಿಸಲಾಗಿತ್ತು. ಮುಂದಿನ ವರ್ಷದಿಂದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಪ್ರಯತ್ನ ಮಾಡಲಾಗುವುದು.

ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಯಾವುದೇ ಲೋಪವಾಗಬಾರದು. ಒಂದೇ ಬಾರಿ ಎಲ್ಲ ಪರಿಹಾರ ಒದಗಿಸಲಾಗದು. ಆದರೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಎಂದರು. 

ಸಂಶೋಧನೆಯ ಫಲ ಗ್ರಂಥಾಲಯಗಳಲ್ಲಿ ಉಳಿಯಬಾರದು. ಸಮಾಜವನ್ನು ತಲುಪಬೇಕು. ಆಗ ಮಾತ್ರ ಸಂಶೋಧನೆ ಫಲಪ್ರದವಾಗುವುದು ಎಂದರು.

ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್,  ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ , ಆರ್ಥಿಕ ಇಲಾಖೆ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತಿತರ ಹಿರಿಯ ಅಧಿಕಾರಿಗಳು, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ HD Kumaraswamy

[ccc_my_favorite_select_button post_id="105331"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!