ದೊಡ್ಡಬಳ್ಳಾಪುರ, (ಆ.28): ಸಾಗುತ್ತಿದ್ದ ಟ್ರಾಕ್ಟರ್‌ಗೆ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಸವಾರ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಸೋಮವಾರ ರಾತ್ರಿ ರಾಜ್ಯ ಹೆದ್ದಾರಿ ತಪಸೀಹಳ್ಳಿ ಸಮೀಪ ಸಂಭವಿಸಿದೆ.
ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಕೆಳಗಿನ ನಾಯಕರಂಡಹಳ್ಳಿಯ ಮಂಜುನಾಥ್ ನಾಯಕ (28 ವರ್ಷ) ಸ್ಥಳದಲ್ಲಿಯೇ ಸಾವನಪ್ಪಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಇನ್ಸ್‌ಪೆಕ್ಟರ್ ಮುನಿಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….