ದೊಡ್ಡಬಳ್ಳಾಪುರ, (ಆ.28): ತಾಲೂಕಿನ ಆರೂಢಿ ಗ್ರಾಮಪಂಚಾಯಿತಿಯ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಕಳೆದ ಶನಿವಾರ ನಡೆದ ಕಾನೂನಿನ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ ಅವರು ನೀಡಿರುವ ಆದೇಶಗಳ ಅನುಷ್ಠಾನಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಶಾಲಾ ಮಕ್ಕಳಿಗೆ ಇಂದು ಶೂ ಇಂದು ವಿತರಿಸಲಾಗಿದ್ದು, ಅಂಗನವಾಡಿ ಕೇಂದ್ರಕ್ಕೆ ಆಟಿಕೆಗಳನ್ನು ಗ್ರಾಮಪಂಚಾಯಿತಿ ಸದಸ್ಯೆ ನಾಗರತ್ನಮ್ಮ ರಮೇಶ್ ವಿತರಿಸಿದರು.
ಉಳಿದಂತೆ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಗಿದ್ದು, ಸಿಸಿ ಚರಂಡಿ ಕಾರ್ಯ ಆರಂಭಿಸಲಾಗಿದೆ. ಅಲ್ಲದೆ ಅಂಗನವಾಡಿ ಹಾಗೂ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಜಮೀನು ಗುರುತಿಸಿ ಇ-ಖಾತೆ ಪ್ರಕ್ರಿಯೆ ನಡೆಸಲಾಗುತ್ತಿದೆ.
ಉಳಿದಂತೆ ಸರ್ಕಾರಿ ಸ್ಮಶಾನ ಒತ್ತುವರಿ ತೆರವು ಕುರಿತಂತೆ ಮಂಗಳವಾರ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ಇದೇ ರೀತಿ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಲ್ಲುಕುಂಟೆ ಗ್ರಾಮದಲ್ಲಿ ನ್ಯಾಯಾಧೀಶರು ನೀಡಲಾಗಿದ್ದ ಆದೇಶದ ಅನ್ವಯ ರೇಷನ್ ಕಾರ್ಡ್ ವಿತರಣೆ, ನಕಾಶೆ ದಾರಿ ಮುಂತಾದ ಸೂಚನೆಗಳು ಪ್ರಗತಿಯಲ್ಲಿವೆ ಎಂದು ತಿಳಿದು ಬಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….