ಕನಕಪುರ, (ಸೆ.05): ನಿಗಮ ಮಂಡಳಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಶಾಸಕರಿಗೆ ಆದ್ಯತೆ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕನಕಪುರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ನಾನು ಮಾತ್ರ ಮಂತ್ರಿಯಾಗಿ, ಶಾಸಕರುಗಳು ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಕ್ಕೆ ಸಿಗುತ್ತದೆ. ನಿಗಮ ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು’ ಎಂದು ಡಿಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
‘ನಿಗಮ ಮಂಡಳಿ ನೇಮಕಾತಿ ವೇಳೆ ಯಾರಿಗೆಲ್ಲಾ ಅವಕಾಶ ನೀಡಲಾಗುತ್ತದೆ’ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ ಅವರು “ಎಲ್ಲಾ ಶಾಸಕರು ಅವಕಾಶ ಕೇಳುತ್ತಿಲ್ಲ 20- 25 ಜನರು ಕೇಳುತ್ತಿದ್ದಾರೆ. ಅದರಲ್ಲಿ 15 ಜನರಿಗೆ ಅವಕಾಶ ನೀಡುತ್ತೇವೆ, ಮಿಕ್ಕ ಸ್ಥಾನಗಳನ್ನು ಕಾರ್ಯಕರ್ತರಿಗೆ ನೀಡಲಿದ್ದೇವೆ” ಎಂದು ತಿಳಿಸಿದ್ದಾರೆ.
ಎರಡುವರೆ ವರ್ಷ ಅವಕಾಶ ನೀಡುತ್ತೇವೆ. ನಮ್ಮ ಶಾಸಕರು ಹಾಗೂ ಕಾರ್ಯಕರ್ತರಿಗೆ ಅಧಿಕಾರ ಹಾಗೂ ಅವಕಾಶ ಕೊಡುತ್ತೇವೆ, ಮಾಧ್ಯಮಗಳಿಗೆ ಅವಸರ ಏಕೆ? ಶಾಸಕರುಗಳು ನಮ್ಮ ನಾಯಕರುಗಳಲ್ಲವೇ?” ಎಂದು ಅವರು ಉತ್ತರಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….