ದೌರ್ಜನ್ಯ ತಡೆಗೆ ಪೊಲೀಸು-ಕಾನೂನು-ಸಮಾಜ ಕಲ್ಯಾಣ ಮತ್ತು ಕಂದಾಯ ಇಲಾಖೆ ನಡುವೆ ಸಮನ್ವಯ ಇರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆ.7): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜ‌ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. 

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು 3 ಗಂಟೆಗಳ ಕಾಲ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಬಳಿಕ ಅಧಿಕಾರಿ ವರ್ಗಕ್ಕೆ ಈ ಸೂಚನೆ ನೀಡಿದರು.  

ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ಒದಗಿಸಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣದಿಂದ ಎಸ್.ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ,  ನಾಗರಿಕ ಹಕ್ಕು ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸರ್ಕಾರ ಈ ಕಾಯ್ದೆಗೆ ಹೆಚ್ಚಿನ‌ ಮಹತ್ವ ನೀಡಿ ಗಂಭೀರವಾಗಿ ಪರಿಗಣಿಸುತ್ತದೆ. ಸಂತ್ರಸ್ತರಿಗೆ ರಕ್ಷಣೆ ಸಿಗಬೇಕು. ಈ ಉದ್ದೇಶ ಸಫಲವಾಗಲು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್‌ ಇಲಾಖೆ, ಪ್ರಾಸಿಕ್ಯೂಷನ್‌ ಇಲಾಖೆ, ಕಂದಾಯ ಇಲಾಖೆ ಸಮನ್ವಯದೊಂದಿಗೆ ಕೆಲಸ ಮಾಡಬೇಕು. 

ಸಮನ್ವಯ ಇದ್ದಾಗ ಮಾತ್ರ ವ್ಯವಸ್ಥಿತವಾಗಿ ಈ ವರ್ಗದ ಜನರಿಗೆ ನ್ಯಾಯ ಸಿಗಲು ಸಾಧ್ಯವಾಗುತ್ತದೆ ಎಂದರು. 

ಪೊಲೀಸ್ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಎರಡು ತಿಂಗಳೊಳಗೆ ಚಾರ್ಜ್‌ ಶೀಟ್‌ ಹಾಕುವ ಬಗ್ಗೆ ಎಸ್‌.ಪಿ. ಗಳಿಗೆ, ಡಿಸಿಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪೊಲೀಸರು ಜಾಗರೂಕತೆಯಿಂದ ತನಿಖೆ ಮಾಡಬೇಕು. ಇವುಗಳನ್ನು ವಿಶೇಷ ಪ್ರಕರಣ ವೆಂದು ಪರಿಗಣಿಸಿ ಶಿಕ್ಷೆ ಕೊಡಿಸಲು ಎಲ್ಲ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು. 

ರಾಜ್ಯದಲ್ಲಿ ಶಿಕ್ಷೆ ಪ್ರಮಾಣ ಶೇ. 3.44 ರಷ್ಟಿರುವುದು ನಾಚಿಕೆಯ ಸಂಗತಿ. ಇದನ್ನು ಇನ್ನಷ್ಟು ಹೆಚ್ಚಿಸುವಂತೆ ಸೂಚಿಸಿದರು. ಪ್ರಜ್ಞಾವಂತ ಸಮಾಜವಿರುವ ನಮ್ಮ ರಾಜ್ಯದಲ್ಲಿ ಇಷ್ಟು ಕಡಿಮೆ ಇರುವುದು ತಲೆ ತಗ್ಗಿಸುವ ವಿಚಾರ. ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳು ಇದರ ಪ್ರಗತಿ ಪರಿಶೀಲನೆ ಮಾಡಬೇಕು. ಪೊಲೀಸ್‌ ವರಿಷ್ಠಾಧಿಕಾರಿಗಳು ಈ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ, ಡಿ.ಜಿ.ಪಿ. ಅವರಿಗೆ ವರದಿ ಕಳುಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು. 

ತಾಲ್ಲೂಕು, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಲ್ಲಿ ಈ ವಿಷಯದ ಕುರಿತು ಕಡ್ಡಾಯವಾಗಿ ಪ್ರಗತಿ ಪರಿಶೀಲನೆ ಆಗಬೇಕು. ಚಾರ್ಜ್‌ ಶೀಟ್‌ ಸಲ್ಲಿಕೆಯನ್ನು ಯಾವುದೇ ಕಾರಣಕ್ಕೆ ವಿಳಂಬ ಮಾಡಬಾರದು. ಸಾಕ್ಷ್ಯ ವಿಫಲ ಆಗದಂತೆ ಪೊಲೀಸರು ಹೆಚ್ಚಿನ ಗಮನ ಕೊಡಬೇಕು. 

ರಾಜಕಾರಣಿಗಳು ಈ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯ ಪ್ರವೇಶಿಸದೆ ಪೊಲೀಸರಿಗೆ ಸಹಕಾರ ನೀಡಬೇಕು. ಪ್ರತಿ ಪ್ರಕರಣ ದಾಖಲಿಸುವಾಗ ಪೊಲೀಸರು ತಮ್ಮ ವಿವೇಚನೆಯನ್ನು ಬಳಸಬೇಕು. ಚಾರ್ಜ್‌ ಶೀಟ್‌ ಸಲ್ಲಿಕೆ ವಿಳಂಬವಾದರೆ ಆರೋಪಿಗಳು ಜಾಮೀನು ಪಡೆದು ಹೊರಬಂದು ಮತ್ತೊಮ್ಮೆ ಅಪರಾಧ ಎಸಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು. 

ಮುಂದಿನ ಸಭೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅವಧಿ ಮತ್ತು ಇತರ ಮಾಹಿತಿಯನ್ನು ಒದಗಿಸಬೇಕು. ಹೆಚ್ಚು ಪ್ರಕರಣಗಳು ಬಾಕಿ ಇರುವಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುವುದು. ಅನುಕಂಪ ಆಧಾರದ ಉದ್ಯೋಗ ನೀಡುವುದರಲ್ಲಿ 54 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದೆ. ಬಹಳಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಎರಡು ವರ್ಷದೊಳಗೆ ಅರ್ಜಿ ಸಲ್ಲಿಸಬೇಕೆಂಬ ಷರತ್ತಿನ ಬಗ್ಗೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಬಾರಿ ಆಯವ್ಯಯದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವನ್ನು ಬಲಪಡಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಗೃಹ ಸಚಿವರು ನನ್ನೊಂದಿಗೆ ಚರ್ಚಿಸಿದ್ದಾರೆ. ಇದನ್ನು ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಸಚಿವರಿಗೆ ಸೂಚಿಸಿದರು.

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ಕರೆಯಲಾಗುವುದು.

ಕಾನೂನು ಬಾಹಿರವಾಗಿ ನಡೆಯುವ ದೌರ್ಜನ್ಯಗಳನ್ನು ತಡೆಯಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಯಮಕ್ಕೆ ತಿದ್ದುಪಡಿ ಮಾಡಿ ಈ ಸಮುದಾಯಗಳ ಎಲ್ಲ ಸಚಿವರು, ಸಂಸದರು, ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಈ ದೌರ್ಜನ್ಯ ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಧಿಕಾರಿಗಳು ತಮ್ಮ ಧೋರಣೆಯನ್ನು ಬದಲಿಸಿಕೊಂಡು ಕಾರ್ಯನಿರ್ವಹಿಸಬೇಕು. ಆರು ತಿಂಗಳಿಗೊಮ್ಮೆ ಈ ಸಭೆ ಕರೆಯುವಂತೆ ತಿಳಿಸಿದರು.

ಸಭೆಯಲ್ಲಿ‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌.ಸಿ. ಮಹಾದೇವಪ್ಪ ಹಾಗೂ ಸಚಿವರಾದ ಡಾ. ಜಿ. ಪರಮೇಶ್ವರ, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್‌ ಖರ್ಗೆ, ಆರ್.ಬಿ. ತಿಮ್ಮಾಪೂರ, ಕೆ.ಎನ್. ರಾಜಣ್ಣ, ನಾಗೇಂದ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಕ್ಷೇತ್ರಗಳ ಶಾಸಕರು, ಸಂಸದರು, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು ಭಾಗಿ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ನೇತೃತ್ವದಲ್ಲಿ 90 ಬಸ್ಸು

[ccc_my_favorite_select_button post_id="105238"]
ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಅಧ್ಯಕ್ಷರ ಮೆರವಣಿಗೆಗೆ ಚಾಲನೆ

ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಅಧ್ಯಕ್ಷರ ಮೆರವಣಿಗೆಗೆ ಚಾಲನೆ

ಸಮ್ಮೇಳಾಧ್ಯಕ್ಷರಾದ ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ.ಕೆಂಪಣ್ಣ ಅವರನ್ನು ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆಯ ಮೂಲಕ ಸಮ್ಮೇಳನ Kanasavadi

[ccc_my_favorite_select_button post_id="105216"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!