ಅನಕ್ಷರಸ್ಥರಿಗೆ ಅಕ್ಷರ ಜ್ಞಾನ ನೀಡಿ ಪ್ರೋತ್ಸಾಹಿಸಿ: ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್

ಬೆಂ.ಗ್ರಾ.ಜಿಲ್ಲೆ, (ಸೆ.08): ವಿದ್ಯಾರ್ಥಿಗಳು ನಿಮ್ಮ ನೆರೆಹೊರೆಯ ಅನಕ್ಷರಸ್ಥರಿಗೆ ಅಕ್ಷರ ಜ್ಞಾನ ನೀಡಿ ಅವರನ್ನು ಅಕ್ಷರಸ್ಥರನ್ನಾಗಿ ಮಾಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಇಲಾಖೆ ಮತ್ತು ಡಯಟ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ  ಏರ್ಪಡಿಸಲಾಗಿದ್ದ 57 ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಸಾಕ್ಷರತಾ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ  ಉದ್ಘಾಟಿಸಿ  ಅವರು ಮಾತನಾಡಿದರು.

ಸಾಕ್ಷರತೆ ಕಲಿಕೆ ಕಾರ್ಯಕ್ರಮವನ್ನು ಪಂಚವಾರ್ಷಿಕ ಯೋಜನೆಗಳು ಜಾರಿಯಾದ ಸಂದರ್ಭದಲ್ಲಿ ಜಾರಿಗೆ ತರಲಾಯಿತು. ವಿದ್ಯಾವಂತರು ವಯಸ್ಕ ಅನಕ್ಷರಸ್ಥರನ್ನು ದತ್ತು ಪಡೆದು ಅವರಿಗೆ ಅಕ್ಷರ ಜ್ಞಾನ ನೀಡುವುದು ಇದರ ಉದ್ದೇಶವಾಗಿತ್ತು. ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ಜನರು ಶಿಕ್ಷಣ ವಂಚಿತರಾಗುತ್ತಿದ್ದರು. ಅಂತಹ ಅನಕ್ಷರಸ್ಥರನ್ನು ಗುರ್ತಿಸಿ  ಶಿಕ್ಷಣವನ್ನು ನೀಡಬೇಕು. ಜಿಲ್ಲೆಯಲ್ಲಿ ಶೇಕಡ 87.22ರಷ್ಟು ಜನರು ವಿದ್ಯಾವಂತರಿದ್ದಾರೆ. ಇನ್ನುಳಿದಂತಹ ಅನಕ್ಷರಸ್ಥರನ್ನು ವಿದ್ಯಾವಂತರನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣ ವಂಚಿತ  ವಯಸ್ಕ ಅನಕ್ಷರಸ್ಥರನ್ನು  ದತ್ತು ಪಡೆದು ಅವರಿಗೆ ಅಕ್ಷರ ಜ್ಞಾನ ತುಂಬಬೇಕು ಎಂದು ಹೇಳಿದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ವಿಶ್ವನಾಥಪುರದಲ್ಲಿ ಸಾಕ್ಷರತಾ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಸಾಕ್ಷರತಾ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನವ ಸಾಕ್ಷರರನ್ನು ಹಾಗೂ ಸಾಕ್ಷರತಾ ಸಂಪನ್ಮೂಲ ವ್ಯಕ್ತಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಶಿಕ್ಷಕ ಸಿ ವಿ ಲೋಕೇಶ್ ತಂಡದವರಿಂದ ಸಾಕ್ಷರಗೀತೆಗಳು ಮೂಡಿಬಂದವು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ‌ ನಿರ್ದೇಶಕರಾದ ಶ್ರೀಕಂಠ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಶಶಿಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ‌ ನಿರ್ದೇಶಕರಾದ ನಟರಾಜ್, ದೇವನಹಳ್ಳಿ ಬಯಲು ಕಾರಾಗೃಹ ಅಧೀಕ್ಷಕರಾದ ಮೋಹನ್ ಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಕೆ.ಜೈಕುಮಾರ್, ರಾಜ್ಯ ಸಂಪನ್ಮೂಲ ವ್ಯಕ್ತಿ ಎಂ.ವಿ. ರಾಜಕುಮಾರ್ ಕಾರ್ಯಕ್ರಮ ಸಂಯೋಜಕಿ ಪುಷ್ಪಾ ಮತ್ತಿತರರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಆಘಾತಕಾರಿ ಘಟನೆ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ..!

ಆಘಾತಕಾರಿ ಘಟನೆ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ..!

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನು ಅವರ ಮನೆಯಲ್ಲೇ ಕೊಲೆ (Murder) ಮಾಡಿರುವ ಆಘಾತಕಾರಿ ಘಟನೆ ಹೆಚ್‌ಎಸ್‌ ಆ‌ರ್ ಲೇಔಟ್‌ನಲ್ಲಿ ಇಂದು. harithalekhani

[ccc_my_favorite_select_button post_id="105594"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!