ದೊಡ್ಡಬಳ್ಳಾಪುರ, (ಸೆ.08): ತಾಲೂಕಿನ ಕೊನೇನಹಳ್ಳಿ ಹೊರವಲಯದಲ್ಲಿ ಹಾದು ಹೋಗಿರುವ ಪವರ್ ಗ್ರೀಡ್ ವಿದ್ಯುತ್ ಕಂಬದಲ್ಲಿ ಯುವಕನ ಶವ ಪತ್ತೆಯಾಗಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮೃತ ಯುವಕನನ್ನು ಕಂಗಳಾಪುರ ಗ್ರಾಮದ ಅಮೃತ್ ಕೆ.ಆರ್. (25 ವರ್ಷ) ಎಂದು ಗುರುತಿಸಲಾಗಿದ್ದು, ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ ಎಂದು ಪೋಷಕರು ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….