ಬೆಂಗಳೂರು, (ಸೆ.08): ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ರಚಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿಯೂ ಕಣ್ಣಿಟ್ಟಿರುವ ರಾಜ್ಯ ಕಾಂಗ್ರೆಸ್ ಮಣಿಸಲು ಬಿಜೆಪಿ ಜೆಡಿಎಸ್ ಮೈತ್ರಿ ಕುರಿತಾದ ಊಹಾಪೋಹಗಳಿಗೆ ತೆರೆಬಿದ್ದಿದ್ದು, ಮೈತ್ರಿ ಪಕ್ಕಾ ಆಗಿದೆ.
ಈ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಬಹಳ ಮಹತ್ವದ್ದಾಗಿದೆ. ಈ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಂದಾಗುವುದು ಮುಖ್ಯವಾಗಿತ್ತು. ಹೀಗಾಗಿ ನಾವು ಒಗ್ಗಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದಿದ್ದಾರೆ
ಉಳಿದಂತೆ ಮೈತ್ರಿ ಸ್ಥಾನಗಳ ಹಂಚಿಕೆ ಬಗ್ಗೆ ಮುಂದೆ ತೀರ್ಮಾನ ಆಗಲಿದೆ. ನಮ್ಮ ಹೈಕಮಾಂಡ್ ಇದರ ಬಗ್ಗೆ ತೀರ್ಮಾನ ಮಾಡಲಿದೆ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….