ಬೆಂ.ಗ್ರಾ.ಜಿಲ್ಲೆ, (ಸೆ.11): ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಬೆಂಗಳೂರು ವತಿಯಿಂದ ಸೆಪ್ಟೆಂಬರ್ 14 ರಂದು ಬೆಳಿಗ್ಗೆ 11.00 ರಿಂದ ಅಪರಾಹ್ನ 3.00 ರವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು “ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಕೊಠಡಿ ಸಂಖ್ಯೆ: 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನ ಪ್ರತಿಗಳು ಹಾಗೂ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ನೋಂದಣಿಯನ್ನು ಮಾಡಿಸಿಕೊಳ್ಳಬಹುದಾಗಿದೆ .
ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಏಷ್ಯಾಟಿಕ ಕಟ್ಟಡ, 2ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು-09 ಅಥವಾ ದೂರವಾಣಿ ಸಂಖ್ಯೆ: 080-22374582, 9448220647 ಗೆ ಸಂಪರ್ಕಿಸಬಹುದು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….