ದೊಡ್ಡಬಳ್ಳಾಪುರ, (ಸೆ.15): ನಗರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಂವಾದ ಸಭೆ ಹಾಗೂ ಸುರಕ್ಷಾ ದಿನವನ್ನು ಸೆಪ್ಟೆಂಬರ್ 16ರಂದು ಆಯೋಜಿಲಾಗಿದೆ.
ವಿದ್ಯುತ್ ಗ್ರಾಹಕರ ಕುಂದು – ಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೆ.16ರ ಶನಿವಾರ ಮಧ್ಯಾಹ್ನ 3 ಗಂಟೆಗೆ ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದುಕೊರತೆ / ನ್ಯೂನತೆಗಳನ್ನು ಪರಸ್ಪರ ಚರ್ಚಿಸಿ ಸ್ನೇಹ ಪೂರ್ವಕವಾಗಿ ಬಗೆಹರಿಸಿಕೊಳ್ಳಲು, ಇಲಾಖೆ ಆದೇಶದ ಮೇರೆಗೆ ಪ್ರತಿ ತಿಂಗಳ 3ನೇ ಶನಿವಾರದಂದು ಸಭೆಯನ್ನು ನಡೆಸಲಾಗುತ್ತಿದೆ.
ಈ ನಿಟ್ಟಿನಲ್ಲಿ ನಗರ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ( o&M-1, o&M-2, ,ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆಯ ) ಸಾರ್ವಜನಿಕರು, ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….