ದೊಡ್ಡಬಳ್ಳಾಪುರ, (ಸೆ.16): ಫೋಟೋ ಸ್ಟುಡಿಯೋಗೆ ಅಳವಡಿಸಿದ್ದ ಬಾಗಿಲಿನ ಬೀಗ ಮುರಿದಿರುವ ಕಳ್ಳನೋರ್ವ ಲಕ್ಷಾಂತರ ರೂ ಮೌಲ್ಯದ ಕ್ಯಾಮೆರಾಗಳನ್ನು ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ನಡೆದಿದೆ.
ಗುರುವಾರ ರಾತ್ರಿ ಸುನೀಲ್ ಎನ್ನುವವರಿಗೆ ಸೇರಿದ ಗೌರಿ ಸ್ಟುಡಿಯೋ ಬಾಗಿಲಿನ ಬೀಗ ಒಡೆದು ಒಳನುಗ್ಗಿರುವ ಕಳ್ಳ, 3ಲಕ್ಷ ಮೌಲ್ಯದ ಎರಡು ಕ್ಯಾಮೆರಾಗಳು, 18 ಸಾವಿರ ಮೌಲ್ಯದ ಎರಡು ಪ್ಲಾಶ್, ಎರಡು ಪೆನ್ ಡ್ರೈವ್ ಅನ್ನು ಬ್ಯಾಗಿಗೆ ತುಂಬಿಕೊಂಡು ಪರಾರಿಯಾಗಿದ್ದಾನೆ ಎಂದು ದೂರಲಾಗಿದೆ.
ಕಳ್ಳನ ನಡೆಸಿರುವ ದೃಶ್ಯ ಸ್ಟುಡಿಯೋದ ಒಳಗೆ ಅಳವಡಿಸಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….