ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು, (ಸೆ.17): ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು  ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಇರಬೇಕಾಗುತ್ತದೆ. ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲನೆ ಮಾಡಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು ಅನುದಾನ  ಹೆಚ್ಚು ಮಾಡಲಾಗುವುದು ಎಂದು ಭರವಸೆ  ನೀಡಿದರು. 

ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು: ನಾವು ಸಮಾಜದಲ್ಲಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸಬೇಕು. ಹಾಗೆ ಮಾಡುವುದೇ ನಮ್ಮೆಲ್ಲರ ಕರ್ತವ್ಯ. ನಾವು ಎಷ್ಟು ದಿನ ಬದುಕಿರುತ್ತೇವೆ ಎನ್ನುವುದು ಮುಖ್ಯ ಅಲ್ಲ. ರಾಷ್ಟ್ರ ಕವಿ ಕುವೆಂಪು ಹೇಳುವಂತೆ ಎಲ್ಲ ರೂ ವಿಶ್ವಮಾನವರಾಗಿಯೇ ಹುಟ್ಟಿದರೂ, ಬೆಳೆಯುವಾಗ ಅಲ್ಪ ಮಾನವರಾಗುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನ ಮಾಡುವುದೇ ಸಮಾಜಕ್ಕೆ ಕೊಡುವ ಕೊಡುಗೆ. ನಾವು ಮನುಷ್ಯರಾಗಿ ಬಾಳುವ ಪ್ರಯತ್ನ ಮಾಡಬೇಕು. ಧರ್ಮ, ಧರ್ಮಗಳ ನಡುವೆ ಸಂಘರ್ಷ, ಜಾತಿ ಜಾತಿಗಳ  ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಧರ್ಮ ಬದುಕಿನ ಮಾರ್ಗ. ಮನುಷ್ಯನ ಬದುಕಿಗಾಗಿ ಧರ್ಮವಿದೆ. ಯಾವ ಧರ್ಮ ಮನುಷ್ಯನನ್ನು ದ್ವೇಷಿಸುತ್ತದೆಯೋ ಅದನ್ನು ಧರ್ಮ ಎಂದು ಕರೆಯಲಾಗುವುದಿಲ್ಲ. ಬಸವಣ್ಣ ಹೇಳಿದಂತೆ  ದಯೆಯೇ ಧರ್ಮದ ಮೂಲ. ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು. ಮನುಷ್ಯರಾಗಲು ಪ್ರಯತ್ನಿಸೋಣ. ನಾವು ಸಮಾಜದ ಋಣ ತೀರುಸುವ ಕೆಲಸ ಮಾಡಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.

ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟ: ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅನೇಕ ಹಿಂದುಳಿದ ಜಾತಿಗಳ ಜಯಂತಿ ಹಾಗೂ ನಿಗಮಗಳನ್ನೂ ರಚನೆ ಮಾಡಲು ತೀರ್ಮಾನ ಮಾಡಿ ಹಣವನ್ನೂ ಒದಗಿಸಿದ್ದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟವಾಗುತ್ತದೆ. 

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ: ಆಯಾ ಜಾತಿಯವರೇ ತಮ್ಮ ಜಯಂತಿಗಳನ್ನು ಆಚರಣೆ ಮಾಡಿದರೆ ಜಾತಿ ಬಣ್ಣ ಬರುತ್ತದೆ. ಸರ್ಕಾರ ಮಾಡಿದರೆ ಜಾತಿ ಬಣ್ಣ ಬರುವುದಿಲ್ಲ. ನಾವು ಸರ್ವರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡುವುದರಲ್ಲಿ ನಂಬಿಕೆವುಳ್ಳವರು. ಕೆಲವೇ ಜಾತಿಗಳ ಸಮಾಜ ನಿರ್ಮಾಣವಾಗಬಾರದು. ನಮ್ಮಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಅನಾದಿ ಕಾಲದಿಂದಲೂ ನೈಪುಣ್ಯತೆ, ಕೌಶಲ್ಯವಿದ್ದರೂ ಆರ್ಥಿಕವಾಗಿ ಸಬಲರಲ್ಲ. ಸಬಲರಾಗಲು ಆರ್ಥಿಕ, ಸಾಮಾಜಿಕ  ರಾಜಕೀಯ ಅವಕಾಶಗಳು ಸಿಗಬೇಕು. ಇಲ್ಲದಿದ್ದರೆ ಯಾವ ಜಾತಿಯೂ ಮೇಲೆ ಬರಲು ಸಾಧ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸಾರ್ಥಕವಾಗಲು, ರಾಜಕೀಯ ಪ್ರಜಾಪ್ರಭುತ್ವ ಇದ್ದರೆ ಸಾಲದು, ಆರ್ಥಿಕ ಸಾಮಾಜಿಕ ಪ್ರಜಾಪ್ರಭುತ್ವ ಇರಬೇಕು ಎಂದು ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ ಎಂದು ಪುನರುಚ್ಚರಿಸಿದರು. 

 ಸ್ವಾತಂತ್ರ್ಯ ಗಳಿಸಿ 76 ವರ್ಷಗಳಾಗಿದ್ದರೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಸಂವಿಧಾನದಲ್ಲಿ ಎಲ್ಲರೂ ಸಮಾನರು.ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಬದ್ಧತೆ ಇರುವವರ ಬಳಿ ಅಧಿಕಾರ ಇದ್ದರೆ  ಸಮಾನತೆ ತರಲು ಸಾಧ್ಯ.

ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು: ಸಂವಿಧಾನದ ವಿರುದ್ಧ ಇರುವವರ ಬಳಿ ಅಧಿಕಾರ ಇದ್ದರೆ ಸಾಧ್ಯವಿಲ್ಲ. ಬಹುತ್ವದ ಸಮಾಜ ಉಳ್ಳ ನಾವು ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು. ವೈವಿಧ್ಯ ತೆಯಲ್ಲಿ ಏಕತೆ ಕಾಣಬೇಕು. ಒಂದು ಧರ್ಮ ಆಧಾರಿತ ದೇಶವಲ್ಲ ಇದು. ಒಂದು ಜಾತಿ, ಭಾಷೆ ಆಧಾರಿತ ದೇಶವಲ್ಲ. ಸಹಿಷ್ಣುತೆ, ಸಹಬಾಳ್ವೆ ಎಂದು ಸಂವಿಧಾನ ಹೇಳುತ್ತದೆ ಎಂದರು.

ನಿಮ್ಮ ಧರ್ಮ ಪ್ರೀತಿಸಿ: ಇನ್ನೊಂದು ಧರ್ಮ  ದ್ವೇಷಿಸದಿರಿ: ಪ್ರತಿಯೊಬ್ಬರೂ ನಮ್ಮ ನಮ್ಮ ಧರ್ಮ ಪ್ರೀತಿಸಿ, ಗೌರವಿಸಿ. ಆದರೆ ಇನ್ನೊಂದು ಧರ್ಮವನ್ನು  ದ್ವೇಷಿಸಬಾರದು. ಅವರನ್ನೂ ಪ್ರೀತಿ ಗೌರವದಿಂದ ಕಂಡಾಗ ಮಾತ್ರ ನಾವು ಮನುಷ್ಯರಾಗಲು ಸಾಧ್ಯ.  ಕಾಂಗ್ರೆಸ್ ಅನೇಕ ಜನರಿಗೆ ರಾಜ್ಯಸಭಾ, ವಿಧಾನಪರಿಷತ್ ಸದಸ್ಯರಾಗುವ ಅವಕಾಶ ನೀಡಿದ್ದೇವೆ. ಬಿಂಬಾ  ನಾಯ್ಕರ್, ರಘು ಆಚಾರ್ಯ ಅವರನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ್ದು. ಅವಕಾಶ ದೊರೆತಾಗ ರಾಜಕೀಯ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ರಾಜಕೀಯ ಅಧಿಕಾರವಿಲ್ಲದಿದ್ದರೆ, ನಿಮ್ಮ ಪರವಾಗಿ ಧ್ವನಿ ಎತ್ತುವವರು ಇರುವುದಿಲ್ಲ ಎಂದರು. 

ಜಾತಿ ವ್ಯವಸ್ಥೆಗೆ  ಚಾಲನೆ ಇಲ್ಲ:  ಶಿಕ್ಷಣ ಪಡೆಯದಿದ್ದರೆ  ಸಮಾಜ ಮುಂದುವರೆಯುವುದಿಲ್ಲ. ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಅದಕ್ಕೆ ಚಲನೆ ಇಲ್ಲ. ಸಾಮಾಜಿಕ ವ್ಯವಸ್ಥೆಗೆ ಆರ್ಥಿಕ, ಸಮಾಜಿಕ ಶಕ್ತಿ ಇಲ್ಲದಿದ್ದರೆ, ವ್ಯವಸ್ಥೆ ಬದಲಾಗುವುದಿಲ್ಲ. ಇದು ಬಂದಾಗ ಮಾತ್ರ  ಚಲನೆ ಸಾಧ್ಯ. ಬದಲಾವಣೆಗೆ ವಿರುದ್ಧ ಇರುವವರು ಸಾಮಾಜಿಕ ವೈರಿಗಳು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ HD Kumaraswamy

[ccc_my_favorite_select_button post_id="105331"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!