ಬೆಂ.ಗ್ರಾ.ಜಿಲ್ಲೆ, (ಸೆ.21): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ- 2023 ರ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜಿಸಲಾಗುತ್ತಿದೆ.
ಪ್ರತಿ ವರ್ಷದಂತೆ ಅಕ್ಟೋಬರ್-01 ರಂದು “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2023” ಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ದಿನಾಂಕ:22/09/2023 ರಂದು ಬೆಳಗ್ಗೆ 9:00 ಗಂಟೆಗೆ ಆಯೋಜಿಸಲಾಗಿದೆ.
ಸಾಂಸ್ಕೃತಿಕ ಸ್ಪರ್ಧೆಗಳು: 60 ವರ್ಷದಿಂದ 80 ವರ್ಷ ಮೇಲ್ಪಟ್ಟ ಮಹಿಳೆಯರು, ಪುರುಷರಿಗೆ ಏಕಪಾತ್ರ ಅಭಿನಯ, ಗಾಯನ ಸ್ಫರ್ಧೆ, ಆಶುಭಾಷಣ ಸಾಂಸ್ಕೃತಿಕ ಸ್ಪರ್ಧೆಗಳನ್ನು ಎರ್ಪಡಿಸಲಾಗಿದೆ.
ಕ್ರೀಡಾ ಸ್ಪರ್ಧೆಗಳು: 60 ವರ್ಷದಿಂದ 69 ವರ್ಷದ ಪುರುಷ ಹಾಗೂ ಮಹಿಳೆಯರಿಗೆ ಒಟ, ಜಾವಲಿನ್ ಮ್ಯೂಸಿಕಲ್ ಚೇರ್ ಕ್ರೀಡೆ ಸ್ಪರ್ಧೆ, 70 ರಿಂದ 79 ವರ್ಷ, 80 ವರ್ಷ ಮೇಲ್ಪಟ್ಟ ಪುರುಷ ಮಹಿಳೆಯರಿಗೆ ನಡಿಗೆ, ರಿಂಗ್ ನ್ನು ಬಕೆಟ್ ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್ ಕ್ರೀಡಾ ಸ್ಪರ್ಧೆಗಳನ್ನು ಎರ್ಪಡಿಸಲಾಗಿದೆ.
ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಕಡ್ಡಾಯವಾಗಿ ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗುವುದು ಹಾಗೂ ಒಬ್ಬ ವ್ಯಕ್ತಿಯು 02 ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ (02 ಕ್ರೀಡಾ ಸ್ಪರ್ಧೆಗಳಲ್ಲಿ ಆಗಬಹುದು, 02 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಆಗಬಹುದು ಅಥವಾ 01 ಕ್ರೀಡೆ ಹಾಗೂ 01 ಸಾಂಸ್ಕೃತಿಕ ಸ್ಪರ್ಧೆ ಆಗಬಹುದು) ಅಧಿಕಾರಿಗಳು ವಿಧಿಸುವ ಷರತ್ತುಗಳಿಗೆ ಬದ್ದರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ದೂರವಾಣಿ ಸಂಖ್ಯೆ 9980860605,, ವಿಕಲಚೇತನರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ-080-29787441, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ-08027622030 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….