ದೊಡ್ಡಬಳ್ಳಾಪುರ, (ಸೆ.27): ಲಾರಿ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಲಹಳ್ಳಿ ಸಮೀಪದ ತಿರುವಿನಲ್ಲಿ ಸಂಭವಿಸಿದೆ.
ಬುಧವಾರ ಸಂಜೆ ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆ ಬರುತ್ತಿದ್ದ ಟ್ರಕ್ ಹಾಗೂ ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆ ಸಾಗುತ್ತಿದ್ದ ಲಾರಿ ಏಕಾಏಕಿ ವೇಗವಾಗಿ ಬಂದ ವೇಳೆ, ತಿರುವಿನಲ್ಲಿ ಒಂದಕ್ಕೊಂದು ಕಾಣದೆ ಡಿಕ್ಕಿ ಹೊಡೆದುಕೊಂಡಿವೆ.
ಘಟನೆಯಲ್ಲಿ ಎರಡು ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಹಾಗೂ 108 ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….