ಬೆಂಗಳೂರು, (ಸೆ.27): ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಅಸಮಾಧಾನಗೊಂಡಿದ್ದಾರೆ ಎಂದು ಎರಡೂ ಪಕ್ಷದ ಅನೇಕ ಮುಖಂಡರು, ಮಾಜಿ ಶಾಸಕರು, ಮಾಜಿ ಸಚಿವರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ ತೋರಿದ್ದಾರೆಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್‌ನ ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ವೇಳೆ ಮಾತನಾಡಿದ ಅವರು, ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಆಯಾ ಪಕ್ಷದ ಸದಸ್ಯರು, ಮುಖಂಡರು ಬೇಸರಗೊಂಡಿದ್ದಾರೆ. ಇದು ಅವರ ರಾಜಕೀಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಅಭಿಪ್ರಾಯ ಪಟ್ಟು ಕಾಂಗ್ರೆಸ್ ಸೇರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ನಿನ್ನೆ ರಾತ್ರಿ ಕೂಡ ಮೂರು-ನಾಲ್ಕು ಮಾಜಿ ಶಾಸಕರು ಭೇಟಿಯಾಗಿ ಕಾಂಗ್ರೆಸ್ ಸೇರುವ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದ ಡಿಕೆ ಶಿವಕುಮಾರ್ ಮೈತ್ರಿ ವಿರೋಧಿಸಿ ಹೊರಬರುತ್ತಿರುವ ಕಾರ್ಯಕರ್ತರು ಕಾಂಗ್ರೆಸ್ ಸಿದ್ಧಾಂತ ಒಪ್ಪಿದರೆ ಪಕ್ಷಕ್ಕೆ ಸೇರಿಸಿಕೊಳ್ಳಲು ಸಿದ್ಧ ಎಂದರು.
ಯಶವಂತಪುರ ಕ್ಷೇತ್ರದಿಂದ 150 ಕ್ಕೂ ಅಧಿಕ ಮುಖಂಡರು, ರಾಮನಗರ, ಶಿವಮೊಗ್ಗದಿಂದ ಕೂಡ ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡಿದ್ದೀರಿ, ಸ್ಥಳೀಯ ಸಂಸ್ಥೆ ಚುನಾವಣೆ ಬರುತ್ತಿದೆ ಎಲ್ಲರಿಗೂ ಉತ್ತಮ ಅವಕಾಶವಿದೆ ಎಂದು ಭರವಸೆ ನೀಡಿದರು.
ಮೈತ್ರಿ ಮೂಲಕ ಬಿಜೆಪಿ – ಜೆಡಿಎಸ್ ಅವರ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂಬುದನ್ನು ನಿರೂಪಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಟೀಕಿಸಿದರು. ಯಾವ ಪಕ್ಷ ಜೆಡಿಎಸ್ ಸರ್ಕಾರವನ್ನು ಉರುಳಿಸಿತ್ತೋ ಅದರೇ ಪಕ್ಷದ ಜೊತೆ ಜೆಡಿಎಸ್ ಮೈತ್ರಿ ಮಾಡಿದೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….