ಬೆಂಗಳೂರು, (ನ.27); ಮುಖ್ಯಮಂತ್ರಿ ಗೃಹ ಕಚೇರಿ “ಕೃಷ್ಣಾ”ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂಬಂಧ ಅಹವಾಲಿನಲ್ಲಿ ಬರುವ ಸಮಸ್ಯೆಗಳಿಗೆ ತಕ್ಷಣವೇ ಪರಹಾರ ಕಂಡುಕೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಡಿ.ಸಿ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆನ್ ಲೈನ್ ವಿಡಿಯೋ ಸಂವಾದದಲ್ಲಿ ಭಾಗಿಯಾಗಿದ್ದರು.
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮಹದೇವಮ್ಮ ಅವರಿಗೆ ಮಗ ಆಸ್ತಿಯಲ್ಲಿ ಪಾಲು ಕೊಡದೇ ಮೋಸ ಮಾಡಿದ್ದಾನೆ, ವಿಭಾಗ ಪತ್ರವನ್ನು ಕೊಡಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದರು ಸಿಎಂ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದದಲ್ಲಿ ತುಮಕೂರಿನಿಂದ ಹಾಜರಿದ್ದ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರಿಗೆ ಮಹದೇವಮ್ಮ ಅವರಿಗೆ ಸಹಾಯ ಮಾಡುವುದು ಹಾಗೂ ಪೊಲೀಸರಿಗೆ ತಿಳಿಸುವಂತೆ ಸೂಚನೆ ನೀಡಿದರು.
ಒತ್ತುವರಿ, ರಸ್ತೆ ನಿರ್ಮಾಣ, ಗೃಹ ಲಕ್ಣ್ಮೀ ಯೋಜನೆಯಡಿ ಹಣ ಬಂದಿಲ್ಲ, ಪಡಿತರ ಸಮಸ್ಯೆ, ವರ್ಗವಾದರು ಇನ್ನು ಬಿಡುಗಡೆ ಮಾಡಿಲ್ಲ ಹೀಗೆ ಅನೇಕ ಸಮಸ್ಯೆಗಳು ಅಹವಾಲಿನಲ್ಲಿ ಕೇಳಿಬಂದವು.
ರಾಜ್ಯದಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಇತರೆ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗಿಯಾಗಿದ್ದರು. ಪ್ರತಿಯೊಬ್ಬ ಅರ್ಜಿದಾರರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸಿದ ಮುಖ್ಯಮಂತ್ರಿಗಳು ನೇರವಾಗಿ ಆಯಾ ಜಿಲ್ಲೆಯ ಡಿ.ಸಿ. ಗಳೊಂದಿಗೆ ಮಾತನಾಡಿ ಸಮಸ್ಯೆ ಪರಿಹಾರಕ್ಕೆ ಸೂಚಿಸಿದರು.
ಮಧ್ಯಾಹ್ಮ 1 ಗಂಟೆ ಸುಮಾರಿಗೆ ವಿವಿಧ ಇಲಾಖೆವಾರು ಸುಮಾರು 1,147 ಅರ್ಜಿ ಸಲ್ಲಿಕೆಯಾಗಿದ್ದು, ಇದರಲ್ಲಿ ತಕ್ಷಣವೇ 20 ಅರ್ಜಿಗಳನ್ನು ಸ್ಥಳದಲ್ಲಿ ಪರಿಹರಿಸಲಾಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….