ಪುತ್ತೂರು, (ನ.27): ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾದ ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಕ್ರೀಟನಾಶಕ ಸೇವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾಳೆ.
ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಪುತ್ತೂರಿನ ವಿವೇಕಾನಂದ ಪಿಯು ಕಾಲೇಜಿನ ನಿಶಾ(17 ವರ್ಷ) ಮೃತ ವಿದ್ಯಾರ್ಥಿನಿ.
2 ವಾರ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ರನ್ನಿಂಗ್ ರೇಸ್‌ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದಳು ಎನ್ನಲಾಗಿದೆ. ಬಳಿಕ ತೀರಾ ಖಿನ್ನತೆಗೆ ಒಳಗಾಗಿದ್ದ ನಿಶಾ ಕೀಟನಾಶಕ ಸೇವಿಸಿದ್ದಳು ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….