ದೊಡ್ಡಬಳ್ಳಾಪುರ, (ನ.27); ಇಲ್ಲಿನ ದೇವಾಂಗ ಮಂಡಲಿ ವತಿಯಿಂದ ನಗರದ ಚೌಡೇಶ್ವರಿ ಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ದೇವಾಲಯದಲ್ಲಿ ಶ್ರೀ ಗಿರಿಜಾ ರಾಮಲಿಂಗೇಶ್ವರಸ್ವಾಮಿ ಕಲ್ಯಾಣ ಮಹೋತ್ಸವ ಹಾಗೂ ಬ್ರಹ್ಮ ರಥೋತ್ಸವ ಸಂಭ್ರಮದಿಂದ ನೆರವೇರಿತು.
ಸ್ವಾಮಿಯವರ ಬ್ರಹ್ಮ ರಥೋತ್ಸವದಲ್ಲಿ ನೂರಾರು ಭಕ್ತಾದಿಗಳು ರಥಕ್ಕೆ ಬಾಳೆಹಣ್ಣು ಅರ್ಪಿಸಿ ಧನ್ಯತಾಭಾವ ಮೆರೆದರು.
ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಅಭಿಷೇಕ, ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ ಶ್ರೀ ಗಿರಿಜಾ ರಾಮಲಿಂಗೇಶ್ವರಸ್ವಾಮಿ ಕಲ್ಯಾಣ ಮಹೋತ್ಸವ ನಡೆಯಿತು.
ಸಂಜೆ ಗಿರಿಜಾ ರಾಮಲಿಂಗೇಶ್ವರ ಸ್ವಾಮಿಯ ಉಯ್ಯಾಲೋತ್ಸವ ನಡೆಯಿತು. ಬ್ರಹ್ಮ ರಥೋತ್ಸವದ ಅಂಗವಾಗಿ ಇಲ್ಲಿನ ಗೆಳೆಯರ ಬಳಗ ಹಾಗೂ ವಿವಿಧ ಸೇವಾ ಸಮಿತಿ ವತಿಯಿಂದ ಅರವಂಟಿಗೆ ನಡೆಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….